ಸೋಮವಾರಪೇಟೆಯಲ್ಲಿ ಸ್ವಚ್ಛತಾ ಆಂದೋಲನ

ಸೋಮವಾರಪೇಟೆ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕಾನನವಾಸಿ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯ ಅರಿವು ಮೂಡಿಸಿದರು.  ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಶಿಕ್ಷಕರಾದ ಲತಾ, ಪೂಜಾ ಇದ್ದರು.

Published on
ಸೋಮವಾರಪೇಟೆ: ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕಾನನವಾಸಿ ಇಕೋ ಕ್ಲಬ್ ವತಿಯಿಂದ, ಚೌಡ್ಲು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಪಟ್ಟಣದ ಮಡಿಕೇರಿ ರಸ್ತೆ, ಶಾಂತಳ್ಳಿ ರಸ್ತೆಯಲ್ಲಿ ಶನಿವಾರ ಸ್ವಚ್ಛತಾ ಆಂದೋಲನ ನಡೆಯಿತು.
ಸ್ವಚ್ಛ ಕೊಡಗು-ಸುಂದರ ಕೊಡಗು ಎಂಬ ಘೋಷಣೆಗಳೊಂದಿಗೆ ವಿದ್ಯಾರ್ಥಿಗಳು ರಸ್ತೆಯಲ್ಲಿ ಜಾಥಾ ನಡೆಸಿ ಇಕ್ಕೆಲಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕಕ್ಕೆಹೊಳೆ ಜಂಕ್ಷನ್‌ನ ಬಸವೇಶ್ವರ ವೃತ್ತ, ವಿವೇಕಾನಂದ ವೃತ್ತ, ಆಲೇಕಟ್ಟೆ ರಸ್ತೆ, ಗೌಡ ಸಮಾಜ ರಸ್ತೆ, ಆಂಜನೇಯ ದೇವಾಲಯ ರಸ್ತೆಗಳಲ್ಲಿ ಶ್ರಮದಾನ ನಡೆಸಿದರು.
ಜಾಥಾದಲ್ಲಿ ಸ್ವಾಮಿ ವಿವೇಕಾನಂದ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಚಂದ್ರಾ, ಕಾರ್ಯದರ್ಶಿ ವೆಂಕಟೇಶ್, ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಶಿಕ್ಷಕರಾದ ಲತಾ, ಪೂಜಾ, ರತಿ, ಪ್ರಮೀಳಾ, ಭಾರತಿ, ಇಕೋ ಕ್ಲಬ್ ಸಂಚಾಲಕ ಯೋಗೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net