ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಪಟ್ಟಣದಲ್ಲಿ ಸ್ವಚ್ಛತಾ ಆಂದೋಲನ ಆಯೋಜಿಸಲಾಗಿತ್ತು.
ಪಟ್ಟಣದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಕೊಡ್ಲಿಪೇಟೆ ಗ್ರಾಪಂನ ಆಡಳಿತಾಧಿಕಾರಿ ಮತ್ತು ತಾಪಂ ಇಒ ಪರಮೇಶ್ ಕುಮಾರ್ ಮಾತನಾಡಿ, ಪ್ರತಿದಿನ ಸ್ವಚ್ಛತೆಯನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವಂತೆ ಸಿಬ್ಬಂದಿಗೆ ಸೂಚಿಸಿದರು.