ಮಾದಾಪುರದಲ್ಲಿ ಆಯೋಜಿಸಿದ್ದ ಸಿಎನ್‌ಸಿಯ ೨ನೇ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆದಿಮಸಂಜಾತ ಕೊಡವರನ್ನು ಸಂವಿಧಾನದ ಅಡಿಯಲ್ಲಿ ವಿಶಿಷ್ಟ ಪ್ರಕೃತಿ ಆರಾಧಕ ಧಾರ್ಮಿಕ ಸಮುದಾಯವೆಂದು ಗುರುತಿಸಿ, ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಸ್ವಯಂ-ಆಡಳಿತದ ಭದ್ರತೆ ನೀಡಿದರೆ ಮಾತ್ರ ಕೊಡವರ ಜಮೀನು, ಜಲ, ಸಂಸ್ಕೃತಿ, ಪರಂಪರೆ, ಪರಿಸರ ಮತ್ತು ಜೀವವೈವಿಧ್ಯವನ್ನು ರಕ್ಷಿಸಲು ಸಾಧ್ಯ. ಆದ್ದರಿಂದ ಕೊಡವರ ಪವಿತ್ರ ಕ್ಷೇತ್ರಗಳಾದ ಮಂದ್, ವಿಶಿಷ್ಟ ಕೊಡವ ವಂಶಾವಳಿ ಹಾಗೂ ಸಾಂಪ್ರದಾಯಿಕ ತಾಯ್ನಡಿನ ಇತಿಹಾಸವನ್ನು ಮುನ್ನೆಲೆಗೆ ತರಬೇಕು. ೨೦೨೭ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ಪ್ರತ್ಯೇಕವಾಗಿ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.