ದೇವಟ್ ಪರಂಬ್‌ನಲ್ಲಿ ಹಿರಿಯರಿಗೆ ಸಿಎನ್‌ಸಿ ಪುಷ್ಪ ನಮನ

ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದ ಪ್ರಯುಕ್ತ ಅಗಲಿದ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು. ಎನ್.ಯು.ನಾಚಪ್ಪ, ಕುಶ, ಮನೋಜ್ ಮಂದಣ್ಣ ಇತರರಿದ್ದರು.
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದ ಪ್ರಯುಕ್ತ ಅಗಲಿದ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು. ಎನ್.ಯು.ನಾಚಪ್ಪ, ಕುಶ, ಮನೋಜ್ ಮಂದಣ್ಣ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದೇವಟ್ ಪರಂಬ್‌ನಲ್ಲಿ ಹಿರಿಯರಿಗೆ ಸಿಎನ್‌ಸಿ ಪುಷ್ಪ ನಮನ

ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದ ಪ್ರಯುಕ್ತ ಅಗಲಿದ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಪುಷ್ಪ ನಮನ ಸಲ್ಲಿಸುವ ಮೂಲಕ ಮುಂದಿನ ತಮ್ಮ ಹೋರಾಟದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿ, ಕೊಡವಲ್ಯಾಂಡ್ ಮತ್ತು ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕಾಗಿ ತಮ್ಮ ಅಮೂಲ್ಯ ಪ್ರಾಣವನ್ನು ತ್ಯಾಗ ಮಾಡಿದ ಪೂರ್ವಜರು ಹಾಗೂ ಹಿರಿಯರನ್ನು ಸ್ಮರಿಸುವುದರೊಂದಿಗೆ ಆಶೀರ್ವಾದವನ್ನು ಕೋರಲಾಗಿದೆ ಎಂದರು.
ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಗಳು ಕೊಡವರು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ ಮತ್ತು ಆರ್ಥಿಕ ಹಾಗೂ ರಾಜಕೀಯ ಸ್ವಾತಂತ್ರ್ಯವನ್ನು ಶಾಸನಬದ್ಧವಾಗಿ ರಕ್ಷಿಸಬೇಕು. ಈಶಾನ್ಯ ಭಾರತ, ಲೆಹ್, ಲಡಾಖ್ ಮತ್ತು ಗೂರ್ಖಾಲ್ಯಾಂಡ್ ಮಾದರಿಯಲ್ಲಿ ಕೊಡವಲ್ಯಾಂಡ್ ನ್ನು ಭಾರತೀಯ ಸಂವಿಧಾನದ ೫ನೇ ಮತ್ತು ೬ನೇ ಅನುಸೂಚಿಗಳೊಂದಿಗೆ ೨೪೪ನೇ ವಿಧಿ ಮತ್ತು ೩೭೧ನೇ ವಿಧಿಯ ಅಡಿಯಲ್ಲಿ ಸ್ವಯಂ ಆಡಳಿತದ ಭೂ-ರಾಜಕೀಯ ಸ್ವಾಯತ್ತ ಪ್ರದೇಶವಾಗಿ ತರಬೇಕು. ಕೊಡವ ಬುಡಕಟ್ಟು ಸಮುದಾಯವನ್ನು ಭಾರತೀಯ ಸಂವಿಧಾನದ ಅನುಸೂಚಿಗಳಲ್ಲಿ ಮತ್ತು ಆದಿಮಸಂಜಾತ ಜನರ ಹಕ್ಕುಗಳ ಮೇಲಿನ ವಿಶ್ವಸಂಸ್ಥೆಯ ಘೋಷಣೆಯಡಿಯಲ್ಲಿ ಆದಿಮಸಂಜಾತ ಏಕ-ಬುಡಕಟ್ಟು ಪ್ರಕೃತಿ ಆರಾಧಕ ಗುಂಪಾಗಿ ಗುರುತಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು.
ಪಟ್ಟಮಾಡ ಕುಶ, ಮಂದಪಂಡ ಮನೋಜ್ ಮಂದಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಕೊಟ್ಟುಕತ್ತಿರ ಬಾಬಿ ಪಳಂಗಪ್ಪ ಹಾಗೂ ಮಂದಪಂಡ ವಿಹಾನ್ ದೇವಯ್ಯ ಹಾಜರಿದ್ದು ಪುಷ್ಪ ನಮನ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net