ಹುತಾತ್ಮರಿಗೆ ಸಿಎನ್‌ಸಿ ನಮನ

ದೇವಟ್ ಪರಂಬ್‌ನಲ್ಲಿ ಸಿಎನ್‌ಸಿ ವತಿಯಿಂದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಎನ್.ಯು. ನಾಚಪ್ಪ,ಮಂದಪAಡ ಮನೋಜ್ ಮಂದಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಮಂದಪAಡ ಸೂರಜ್, ಮಂಗೇರಿರ ಜಗದೀಶ್ ಹಾಗೂ ಕೊಟ್ಟುಕತ್ತೀರ ಬಾಬಿ ಪಳಂಗಪ್ಪ ಇದ್ದರು
ದೇವಟ್ ಪರಂಬ್‌ನಲ್ಲಿ ಸಿಎನ್‌ಸಿ ವತಿಯಿಂದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಎನ್.ಯು. ನಾಚಪ್ಪ,ಮಂದಪAಡ ಮನೋಜ್ ಮಂದಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಮಂದಪAಡ ಸೂರಜ್, ಮಂಗೇರಿರ ಜಗದೀಶ್ ಹಾಗೂ ಕೊಟ್ಟುಕತ್ತೀರ ಬಾಬಿ ಪಳಂಗಪ್ಪ ಇದ್ದರು
Published on
ಮಡಿಕೇರಿ:
ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಒತ್ತಾಯಿಸಿದ್ದಾರೆ. ದೇವಟ್ ಪರಂಬ್‌ನಲ್ಲಿ ಸಿಎನ್‌ಸಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕೊಡವಲ್ಯಾಂಡ್ ಮತ್ತು ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕಾಗಿ ತಮ್ಮ ಅಮೂಲ್ಯ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಪೂರ್ವಜರು ಹಾಗೂ ಹಿರಿಯರಿಂದ ನಾವು ಆಶೀರ್ವಾದವನ್ನು ಬೇಡಿದೆವು. ಸಿಎನ್‌ಸಿ ತನ್ನ ಆಕಾಂಕ್ಷೆಗಳು ಮತ್ತು ಬೇಡಿಕೆಗಳನ್ನು ಪುನರುಚ್ಚರಿಸುತ್ತಿದ್ದು, ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಅರಮನೆ ಪಿತೂರಿಯಿಂದ ನಡೆದ ಕೊಡವರ ರಾಜಕೀಯ ಹತ್ಯೆಗಳನ್ನು ಗುರುತಿಸಬೇಕು.
ಭಾರತೀಯ ಸಂವಿಧಾನದ 49ನೇ ವಿಧಿ ಮತ್ತು ಯುನೆಸ್ಕೋದ 1964 ರ ವೆನಿಸ್ ಚಾರ್ಟರ್ ಅಡಿಯಲ್ಲಿ ಈ ದುರಂತಗಳನ್ನು ಅಂತರರಾಷ್ಟ್ರೀಯ ಹೊಲೊಕಾಸ್ಟ್ ಸ್ಮಾರಕ, ವಿಶ್ವಸಂಸ್ಥೆಯ ಅಂತರರಾಷ್ಟಿçÃಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿ ಮತ್ತು ಉಲುಗುಲಿ, ಮುಳ್ಳುಸೋಗೆ ಹಾಗೂ ಲಕ್ಡಿಕೋಟೆಯಲ್ಲಿರುವ ಕೊಡವ ಯುದ್ಧ ಕುರುಹುಗಳನ್ನು ಅಂತರರಾಷ್ಟ್ರೀಯ ಯುದ್ಧ ಸ್ಮಾರಕಗಳಲ್ಲಿ ಸೇರಿಸುವ ಮೂಲಕ ಸ್ಮರಿಸಬೇಕು.
ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಕೊಡವರು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ ಮತ್ತು ಆರ್ಥಿಕ ಹಾಗೂ ರಾಜಕೀಯ ಸ್ವಾತಂತ್ರö್ಯವನ್ನು ಶಾಸನಬದ್ಧವಾಗಿ ರಕ್ಷಿಸಬೇಕು. ಈಶಾನ್ಯ ಭಾರತ, ಲೆಹ್, ಲಡಾಖ್ ಮತ್ತು ಗೂರ್ಖಾಲ್ಯಾಂಡ್ ಮಾದರಿಯಲ್ಲಿ ಕೊಡವಲ್ಯಾಂಡ್ ಅನ್ನು ಭಾರತೀಯ ಸಂವಿಧಾನದ 5 ನೇ ಮತ್ತು 6 ನೇ ಅನುಸೂಚಿಗಳೊಂದಿಗೆ 244 ನೇ ವಿಧಿ ಮತ್ತು 371 ನೇ ವಿಧಿಯ ಅಡಿಯಲ್ಲಿ ಸ್ವಯಂ ಆಡಳಿತದ ಭೂ-ರಾಜಕೀಯ ಸ್ವಾಯತ್ತ ಪ್ರದೇಶವಾಗಿ ತರಬೇಕು. ಕೊಡವ ಬುಡಕಟ್ಟು ಸಮುದಾಯವನ್ನು ಭಾರತೀಯ ಸಂವಿಧಾನದ ಅನುಸೂಚಿಗಳಲ್ಲಿ ಮತ್ತು ಆದಿಮಸಂಜಾತ ಜನರ ಹಕ್ಕುಗಳ ಮೇಲಿನ ವಿಶ್ವಸಂಸ್ಥೆಯ ಘೋಷಣೆಯಡಿಯಲ್ಲಿ ಆದಿಮಸಂಜಾತ ಏಕ-ಬುಡಕಟ್ಟು ಪ್ರಕೃತಿ ಆರಾಧಕ (ಅನಿಮಿಸ್ಟಿಕ್ ) ಗುಂಪಾಗಿ ಗುರುತಿಸಬೇಕೆಂದು ಒತ್ತಾಯಿಸಿದರು.
ಮಂದಪAಡ ಮನೋಜ್ ಮಂದಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಮಂದಪAಡ ಸೂರಜ್, ಮಂಗೇರಿರ ಜಗದೀಶ್ ಹಾಗೂ ಕೊಟ್ಟುಕತ್ತೀರ ಬಾಬಿ ಪಳಂಗಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net