ಕಾಫಿ ಗುಣಮಟ್ಟ ವೃದ್ಧಿಸಲು ಗಮನಹರಿಸಿ

ನಾಪೋಕ್ಲು ಕೊಡವ ಸಮಾಜದ ಸಭಾಂಗಣದಲ್ಲಿ ಭಾರತೀಯ ಕಿಸಾನ್ ಸಂಘದಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಾಫಿ ಬೆಳೆಗಾರರ ಸಮಸ್ಯೆ ಕುರಿತ ಸಭೆಯಲ್ಲಿ ಕಾಫಿ ರಾಷ್ಟ್ರೀಯ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ, ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ, ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ ಕುಮಾರ್, ಕಿಸಾನ್ ಸಂಘದ  ಜಿಲ್ಲಾಧ್ಯಕ್ಷ ಪ್ರವೀಣ್ ಇತರರು ಇದ್ದರು.
ನಾಪೋಕ್ಲು ಕೊಡವ ಸಮಾಜದ ಸಭಾಂಗಣದಲ್ಲಿ ಭಾರತೀಯ ಕಿಸಾನ್ ಸಂಘದಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಾಫಿ ಬೆಳೆಗಾರರ ಸಮಸ್ಯೆ ಕುರಿತ ಸಭೆಯಲ್ಲಿ ಕಾಫಿ ರಾಷ್ಟ್ರೀಯ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ, ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ, ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ ಕುಮಾರ್, ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಪ್ರವೀಣ್ ಇತರರು ಇದ್ದರು.
Published on
ನಾಪೋಕ್ಲು : ಬೆಳೆಗಾರರು ಕಾಫಿಯ ಉತ್ಪಾದನೆ ಹೆಚ್ಚಿಸುವುದರೊಂದಿಗೆ ಗುಣಮಟ್ಟವನ್ನೂ ವೃದ್ಧಿಸಲು ಗಮನಹರಿಸಿದಾಗ ಮಾತ್ರ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಕಾಫಿ ರಾಷ್ಟ್ರೀಯ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ ಹೇಳಿದರು.
ಭಾರತೀಯ ಕಿಸಾನ್ ಸಂಘದ ವತಿಯಿಂದ ನಾಪೋಕ್ಲು ಬೆಳೆಗಾರರ ಹೋರಾಟ ಸಮಿತಿ ಕೊಡವ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ, ಪರಿಹಾರ’ ಸಭೆಯಲ್ಲಿ ಮಾತನಾಡಿದರು. ದೇಶದಲ್ಲಿ ಕಾಫಿಯ ಆಂತರಿಕ ಬಳಕೆ ಹೆಚ್ಚಬೇಕು. ಕಾಫಿ ರಾಷ್ಟ್ರೀಯ ಪಾನೀಯ ಆಗಬೇಕು ಎಂದ
ಅವರು, ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವರೊಂದಿಗೆ ಮುಕ್ತವಾಗಿ ಚರ್ಚಿಸಲಾಗುವುದು ಎಂದರು.
ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗಬೇಕು. ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕಲೇ ಬೇಕಾದರೆ ಉತ್ತಮ ಸಂಘಟನೆಯಿಂದ ಮಾತ್ರ ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ನಾಪೋಕ್ಲು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಮಾತನಾಡಿ, ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕೊಡಗು ಬೆಳೆಗಾರರ ಒಕ್ಕೂಟ 7 ವರ್ಷಗಳಿಂದ ಹೋರಾಟ ಮಾಡಿದೆ. ಸಂಘಟನೆ ಪ್ರಬಲವಾದಾಗ ಸಮಸ್ಯೆಗಳ ಪರಿಹಾರ ಸಾಧ್ಯ. ಕಾಫಿ ಬೆಳೆಗಾರರು ಸಾಧಕ ಬಾಧಕಗಳ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸುವ ಅಗತ್ಯವಿದೆ ಎಂದರು.
ಭಾರತೀಯ ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ ಕುಮಾರ್, ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಪ್ರವೀಣ್, ಮುಖಂಡರಾದ ಮುಂಡಂಡ ನಾಣಯ್ಯ, ಮನು ಮುತ್ತಪ್ಪ ಮಾತನಾಡಿದರು. ಬೆಳೆಗಾರರ ಸಮಸ್ಯೆ, ಕಾಫಿ ಮಾರುಕಟ್ಟೆ, ಗುಣಮಟ್ಟ, ಆಂತರಿಕ ಮಾರುಕಟ್ಟೆ ವಿಸ್ತರಣೆ, ಕಾಫಿ ಪುಡಿಗಳಲ್ಲಿ ಚಿಕೋರಿ ಮಿಶ್ರಣದಿಂದಾಗುವ ಉಪಯೋಗ ಸೇರಿದಂತೆ ಹಲವು ಸಮಸ್ಯೆಯ ಬಗ್ಗೆ ಚರ್ಚಿಸಲಾಯಿತು. ಬೆಳೆಗಾರರಾದ ಪಾಂಡಂಡ ನರೇಶ, ಕೊಂಡೀರ ಗಣೇಶ್, ಉದಯಶಂಕರ್, ಹರೀಶ ಪೂವಯ್ಯ ಮತ್ತಿತರ ಬೆಳೆಗಾರರು ಸಲಹೆ, ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net