ಕೊಡಗು ವಿದ್ಯಾಲಯದಲ್ಲಿ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ಹೆಸರಾಂತ ನಾಣ್ಯ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ ಅವರ ನಾಣ್ಯ, ನೋಟುಗಳ ಸಂಗ್ರಹವನ್ನು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಕುತೂಹಲದಿಂದ ವೀಕ್ಷಿಸಿದರು.
ಹೆಸರಾಂತ ನಾಣ್ಯ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ ಅವರ ನಾಣ್ಯ, ನೋಟುಗಳ ಸಂಗ್ರಹವನ್ನು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಕುತೂಹಲದಿಂದ ವೀಕ್ಷಿಸಿದರು.
Published on
ಮಡಿಕೇರಿ:
ನಗರದ ಕೊಡಗು ವಿದ್ಯಾಲಯದಲ್ಲಿ ಹೆಸರಾಂತ ನಾಣ್ಯ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ ಅವರಿಂದ 177 ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನ ಬುಧವಾರ ನಡೆಯಿತು. ಕೊಡಗು ವಿದ್ಯಾಲಯದ ಗ್ರಂಥಾಲಯದಲ್ಲಿ ಖ್ಯಾತ ನಾಣ್ಯಶಾಸ್ತ್ರಜ್ಞ ಹಾಗೂ ಅಂಚೆಚೀಟಿ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ ತಮ್ಮ 177ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನ ಆಯೋಜಿಸಿದ್ದರು.
1ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪರೂಪದ ಹಾಗೂ ಐತಿಹಾಸಿಕ ಮಹತ್ವವುಳ್ಳ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳನ್ನು ವೀಕ್ಷಿಸಿದರು. ವಿವಿಧ ಕಾಲಘಟ್ಟಗಳ ಇತಿಹಾಸ, ಸಂಸ್ಕೃತಿ ಹಾಗೂ ಆರ್ಥಿಕ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಪ್ರದರ್ಶನ ನೆರವಾಯಿತು.
ಹಳೆಯ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಈ ಪ್ರದರ್ಶನದ ಮುಖ್ಯ ಉದ್ದೇಶವಾಗಿತ್ತು. ಸಂಗ್ರಹವನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಸ್ಫೂರ್ತಿ ಹೊಂದಿ, ತಮ್ಮ ಅಧ್ಯಯನಕ್ಕೆ ಪೂರಕವಾದ ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು.
ಪಿ.ಕೆ. ಕೇಶವಮೂರ್ತಿಯವರು ತಮ್ಮ ನಾಣ್ಯ ಸಂಗ್ರಹದಲ್ಲಿನ ಕೆಲವು ಅಪರೂಪದ ನಾಣ್ಯಗಳನ್ನು ಹಾಗೂ ನಾಣ್ಯಶಾಸ್ತ್ರಕ್ಕೆ ಸಂಬAಧಿಸಿದ ಮೂರು ಅಮೂಲ್ಯ ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿ, ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ಅವರಿಗೆ ಹಸ್ತಾಂತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net