ಶಾಸಕರ ನೇತೃತ್ವದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ

 ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಡಿಸಿ ಸಭೆ ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಮಾದಂಡ ತಿಮ್ಮಯ್ಯ, ಡಾ. ಸರಸ್ವತಿ ಇತರರಿದ್ದರು.
ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಡಿಸಿ ಸಭೆ ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ಮಾದಂಡ ತಿಮ್ಮಯ್ಯ, ಡಾ. ಸರಸ್ವತಿ ಇತರರಿದ್ದರು.
Published on
ವಿರಾಜಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ಸೋಮವಾರ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಶಾಸಕರು ಕಾಲೇಜಿನ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರು ಹಾಗೂ ಸಮಿತಿಯ ಸದಸ್ಯರ ಜತೆಗೆ ಕಾಲೇಜಿನ ಅಭಿವೃದ್ಧಿ ಕುರಿತು ಚರ್ಚಿಸಿದರು. ಕಾಲೇಜಿನಲ್ಲಿ ಮುಂದಿನ ದಿವಸಗಳಲ್ಲಿ ಕೈಗೊಳ್ಳಬೇಕಾಗಿರುವ ಚಟುವಟಿಕೆ ಬಗ್ಗೆ ಚರ್ಚೆ ನಡೆಸಲಾಯಿತು. ಮಾತ್ರವಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಈ ಶೈಕ್ಷಣಿಕ ಸಾಲಿನ ಕಾಲೇಜು ಪ್ರವೇಶಾತಿಯ ಕುರಿತು ಶಾಸಕರು ಮಾತನಾಡಿ, ಉಪಸ್ಥಿತರಿದ್ದ ಸಮಿತಿ ಸದಸ್ಯರು ಹಾಗೂ ಪ್ರಾಂಶುಪಾಲರಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾದಂಡ ತಿಮ್ಮಯ್ಯ, ಪ್ರಾಂಶುಪಾಲರಾದ ಡಾ.ಸರಸ್ವತಿ, ಸಮಿತಿ ಸದಸ್ಯರು, ಉಪನ್ಯಾಸಕರು ಹಾಗೂ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net