ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಿ

ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆಯಲ್ಲಿ ನೂತನ ಶಾಲಾ ಕಟ್ಟಡವನ್ನು ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ಪಟ್ಟಡ ರಂಜಿ ಪೂಣಚ್ಚ, ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ, ವಿಜು ನಾರಾಯಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಗಣೇಶ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್, ಪಾಲಿಬೆಟ್ಟ ವಲಯ ಅಧ್ಯಕ್ಷ ಸಾಬಾ ಕಾಳಪ್ಪ, ಪಂಚಾಯಿತಿ ಸದಸ್ಯ ನಾಸಿರ್ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಸೂಚನೆ
  • ಚೆನ್ನಯ್ಯನಕೋಟೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆಯಲ್ಲಿ ಚೆನ್ನಯ್ಯನಕೋಟೆಯ ಪರಿಶಿಷ್ಟ ಜಾತಿ ಸಮುದಾಯದವರ ಗದ್ದೆಯ ಬಳಿ ನಾಲೆ ನಿರ್ಮಾಣ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ಸಣ್ಣ ನೀರಾವರಿ ಇಲಾಖೆ ಮೂಲಕ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿಯೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಇದಾದ ಬಳಿಕ ಧ್ರುವ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಲು ಗುಣಮಟ್ಟದ ಶಾಲಾ ವಾತಾವರಣ ಅತ್ಯಗತ್ಯ. ನೂತನ ಕಟ್ಟಡ ಹಾಗೂ ಆಧುನಿಕ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ಓದುತ್ತಿರುವ ಆಸಕ್ತಿ ಹೆಚ್ಚಿಸುವುದಲ್ಲದೆ, ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದರು.
ಬಳಿಕ ಬಸವನಹಳ್ಳಿಯಲ್ಲಿ ಶಾಸಕರ ಅನುದಾನವಾದ 10 ಲಕ್ಷ ರೂ.ದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ, ವಿಜು ನಾರಾಯಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಗಣೇಶ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್, ಪಾಲಿಬೆಟ್ಟ ವಲಯ ಅಧ್ಯಕ್ಷ ಸಾಬಾ ಕಾಳಪ್ಪ, ಪಂಚಾಯಿತಿ ಸದಸ್ಯ ನಾಸಿರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net