ಆರೋಗ್ಯ ಶಿಬಿರದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಐಸಿಟಿಸಿ, ಡಿಎಸ್‌ಆರ್‌ಸಿ, ಎನ್‌ಟಿಇಪಿ, ಎನ್‌ಸಿಡಿ, ಆರ್‌ಬಿಎಸ್‌ಕೆ ಹಾಗೂ ಎನ್‌ವಿಎಚ್‌ಸಿಪಿ ಕಾರ್ಯಕ್ರಮಗಳ ವೈದ್ಯರು, ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಪೊಲೀಸ್ ಸಿಬ್ಬಂದಿಯ ಆರೋಗ್ಯ ಸಂರಕ್ಷಣೆ, ರೋಗಗಳ ಆರಂಭಿಕ ಪತ್ತೆ ಮತ್ತು ಆರೋಗ್ಯ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಮಗ್ರ ಆರೋಗ್ಯ ಶಿಬಿರ ಯಶಸ್ವಿಯಾಗಿ ನೆರವೇರಿತು.