ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಸಿದ್ಧತೆ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಟಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಗೊಂದಲಗಳಿಗೆ ಅವಕಾಶ ಮಾಡದೆ, ಸುಸೂತ್ರವಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಇರಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಗಾಳಿ, ಬೆಳಕು, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಕನಿಷ್ಠ ಸೌಲಭ್ಯ ಇರಬೇಕು ಎಂದು ಸಲಹೆ ನೀಡಿದರು.