ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಜತೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅನುಕಾರ್ಯಪ್ಪ, ರಾಕೇಶ್ ಇದ್ದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಜತೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅನುಕಾರ್ಯಪ್ಪ, ರಾಕೇಶ್ ಇದ್ದರು.
Published on
ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ರಾಜಕೀಯ ವಿದ್ಯಮಾನಗಳು, ಅಭಿವೃದ್ಧಿ ಕಾರ್ಯ, ಕೊಡಗಿನ ಸಮಸ್ಯೆಗಳು, ಜನರಲ್ಲಿರುವ ಗೊಂದಲಗಳು ಹೀಗೆ ನಾನಾ ವಿಷಯಗಳ ಬಗ್ಗೆ ಸಂವಾದದಲ್ಲಿ ಬೆಳಕು ಚೆಲ್ಲಲಾಯಿತು.
ಸಚಿವ ಸ್ಥಾನದಿಂದ ವಂಚಿತಗೊಂಡ ಕುರಿತು ಪ್ರತಿಕ್ರಿಯಿಸಿದ ಪೊನ್ನಣ್ಣ ಅವರು, ಹಲವು ವರ್ಷಗಳ ಹಿಂದೆ ಕೊಡಗಿನ ಮೂವರು ಸಚಿವರಾಗಿದ್ದರು. ನಂತರ ದೀರ್ಘಾವಧಿಗೆ ಸಚಿವ ಭಾಗ್ಯ ಜಿಲ್ಲೆಗೆ ದೊರೆತ್ತಿಲ್ಲ‌ ಇದರ ಹಿಂದೆ ರಾಜಕೀಯ ಲೆಕ್ಕಾಚಾರವೂ ಆಡಗಿದೆ. ಹಲವು ಕ್ಷೇತ್ರಗಳನ್ನೊಳಗಂಡ ಜಿಲ್ಲೆ, ಜಾತಿ ಪ್ರಾತಿನಿಧ್ಯ ಹೀಗೆ ನಾನಾ ವಿಷಯದಡಿ ಸಚಿವ ಸ್ಥಾನ ನಿರ್ಧಾರವಾಗುತ್ತದೆ. ಈ ನಡುವೆ ತನಗೆ ಮಂತ್ರಿ ಸ್ಥಾನ ಸಿಗುವ ವಿಶ್ವಾಸವಿತ್ತು. ಇದಕ್ಕಾಗಿ 2 ಶರ್ಟ್ ಗಳನ್ನು ಕೂಡ ಆಯ್ಕೆ ಮಾಡಿಟ್ಟುಕೊಂಡಿದೆ‌. ಕೆಲವೇ ಕ್ಷಣಗಳಲ್ಲಿ ಸಚಿವ ಸ್ಥಾನ ಕೈತಪ್ಪಿದ ವಿಚಾರ ತಿಳಿದು ಬಂತು. ಆದರೆ, ಉಪಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಆಶ್ಚರ್ಯ ಮೂಡಿಸಿತು. ಇದೊಂದು ಸಂವಿಧಾನಾತ್ಮಕ, ಗೌರವನ್ವಿತ ಹಾಗೂ ದೊಡ್ಡ ಜವಾಬ್ದಾರಿ ಹೊಂದಿರುವ ಹುದ್ದೆಯಾಗಿದೆ. ಆದರೆ, ಈ ಹುದ್ದೆಯಲ್ಲಿದ್ದಾರೆ ಕೆಲವೊಂದು ಪರಿಮಿತಿಗೊಳಪಟ್ಟಿರಬೇಕಾಗುತ್ತದೆ. ಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನನ್ನನ್ನು ಕಾನೂನು ಘಟಕದ ಅಧ್ಯಕ್ಷರನ್ನಾಗಿ ಮಾಡಿದ್ದರು. ನನ್ನನ್ನು ರಾಜಕೀಯವಾಗಿ ಬಳಸಿಕೊಳ್ಳಬೇಕೆಂಬುದು ಅವರ ಆಸೆಯಾಗಿತ್ತು. ಈ ಹಿನ್ನೆಲೆ ತನಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ತನ್ನ ಹೆಸರನ್ಬು ಪರಿಗಣಿಸಿದ್ದೆ ಹೆಮ್ಮೆ ತಂದಿದೆ‌. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರಕಾರ ಹಲವು ಬಾರಿ ತಿರಸ್ಕರಿಸಿದ್ದು, ಇದೀಗ ಮತ್ತೊಮ್ಮೆ ಕರಡು ಅಧಿಸೂಚನೆಯನ್ನು ತಿರಸ್ಕಾರ ಮಾಡಿದೆ. ಕೊಡಗಿನ ಗ್ರಾಮಗಳನ್ನು ಸೇರಿಸಿರುವುದು ಸಹಜವಾಗಿ ಆತಂಕ ಮೂಡಿಸುತ್ತದೆ‌. ಪರಿಸರ ಸಂರಕ್ಷಣೆಯೊಂದಿಗೆ ಜನರ ಹಿತಾಸಕ್ತಿ ಕಾಪಾಡುವುದು ಕೂಡ ಸರಕಾರದ ಕರ್ತವ್ಯವಾಗಿದೆ ಎಂದು ಪೊನ್ನಣ್ಣ ಅಭಿಮತ ವ್ಯಕ್ತಪಡಿಸಿದರು.
ಪರಿಸರ ಹಾಗೂ ಪಶ್ಚಿಮಘಟ್ಟ ಖಂಡಿತವಾಗಿಯೂ ಸಂರಕ್ಷಣೆಯಾಗಲೇ ಬೇಕು‌ ಇದು ರಕ್ಷಣೆಯಾದರೆ ಮಾತ್ರ ದೇಶ ಉಳಿಯುತ್ತದೆ.ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳಬಹುದಾಗಿದೆ‌. ಈ ವಿಷಯದಲ್ಲಿ ಪರ-ವಿರೋಧದೊಂದಿಗೆ ವಾಸ್ತವಾಂಶವನ್ನು ತಿಳಿದುಕೊಳ್ಳಬೇಕಾಗಿದೆ. ವರದಿ ಜಾರಿಯಿಂದ ಗ್ರಾಮೀಣ ಭಾಗದ ಜನಜೀವನ, ಕೃಷಿ ಚಟುವಟಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಾಗಲೇ ಅರಣ್ಯ ಇಲಾಖೆಯಿಂದ ಅನೇಕ ಕಡಿವಾಣಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಕರಡು ಅಧಿಸೂಚನೆಯನ್ನು ಒಪ್ಪಲಾಗುವುದಿಲ್ಲ. ರಾಜ್ಯ ಸರಕಾರ ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಯಾವುದಕ್ಕೆ ನಿರ್ಬಂಧ ಹೇರಲಾಗುವುದು ಎಂಬುದನ್ನು ಸ್ಪಷ್ಟಪಡಿಸಲಿ. ಗಣಿಗಾರಿಕೆ, ಕ್ವಾರಿ, ಐಷಾರಾಮಿ ರೆಸಾರ್ಟ್ ಗಳನ್ನು ಬಂದ್ ಮಾಡಲ್ಲಿ ಅದಕ್ಕೆ ನಮ್ಮ ವಿರೋಧವಿಲ್ಲ ಎಂದು ಹೇಳಿದ ಅವರು, ಕೃಷಿ ಚಟುವಟಿಕೆ ಸಂಬಂಧ ಬಾವಿ ನಿರ್ಮಾಣ, ಮರ ಕಪಾತ್ ನಂತಹ ಚುವಟಿಕೆಗಳಿಗೆ ನಿರ್ಬಂಧ ಹೇರುವುದನ್ನು ಒಪ್ಪಲಾಗುವುದಿಲ್ಲ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net