ಸ್ಮಶಾನ ಭೂಮಿ ಮತ್ತು ಅರಣ್ಯ ಇಲಾಖೆ ನಡುವಿನ ಗೊಂದಲಕ್ಕೆ ತೆರೆ

ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ ಸ್ಮಶಾನ ಭೂಮಿ ಮತ್ತು ಅರಣ್ಯ ಇಲಾಖೆಯ ನಡುವೆ ಉಂಟಾಗಿದ್ದ ಗಡಿ ಗೊಂದಲಕ್ಕೆ ತೆರೆ ಎಳೆಯುವ ಸಂಬAಧ ವೈಜ್ಞಾನಿಕವಾಗಿ ಗಡಿ ಗುರುತಿಸುವ ಕಾರ್ಯ ನಡೆಯಿತು.
ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ ಸ್ಮಶಾನ ಭೂಮಿ ಮತ್ತು ಅರಣ್ಯ ಇಲಾಖೆಯ ನಡುವೆ ಉಂಟಾಗಿದ್ದ ಗಡಿ ಗೊಂದಲಕ್ಕೆ ತೆರೆ ಎಳೆಯುವ ಸಂಬAಧ ವೈಜ್ಞಾನಿಕವಾಗಿ ಗಡಿ ಗುರುತಿಸುವ ಕಾರ್ಯ ನಡೆಯಿತು.
Published on
ಮಡಿಕೇರಿ:
ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿ ದೀರ್ಘಕಾಲದಿಂದ ಸ್ಮಶಾನ ಭೂಮಿ ಮತ್ತು ಅರಣ್ಯ ಇಲಾಖೆಯ ನಡುವೆ ಉಂಟಾಗಿದ್ದ ಗಡಿ ಗೊಂದಲಕ್ಕೆ ಈಗ ತೆರೆ ಬಿದ್ದಿದೆ. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ, ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ, ವೈಜ್ಞಾನಿಕವಾಗಿ ಗಡಿ ಗುರುತಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.
ಚಿಕ್ಕಬೆಟ್ಟಗೇರಿ ಗ್ರಾಮದ ಸರ್ವೆ ನಂಬರ್ 1/1 ರಲ್ಲಿ ಸುಮಾರು 0.13 ಸೆಂಟ್ ವಿಸ್ತೀರ್ಣದ ಜಾಗವನ್ನು ಸರ್ಕಾರ ಸ್ಮಶಾನಕ್ಕಾಗಿ ಮಂಜೂರು ಮಾಡಿತ್ತು. ಆದರೆ, ಈ ಜಾಗ ಅರಣ್ಯ ಭೂಮಿಗೆ ಹೊಂದಿಕೊAಡಿರುವುದರಿAದ, ನಿಖರವಾದ ಗಡಿ ಗುರುತಿಸುವಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಇದರಿಂದಾಗಿ ಗ್ರಾಮಸ್ಥರು ಅಂತ್ಯಸAಸ್ಕಾರದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಆಕ್ಷೇಪಣೆ ಅಥವಾ ಜಾಗದ ಕೊರತೆಯ ಭೀತಿಯಿಂದ ಅಡಚಣೆಗಳನ್ನು ಅನುಭವಿಸುತ್ತಿದ್ದರು.
ಈ ಗೊಂದಲವನ್ನು ಶಾಶ್ವತವಾಗಿ ಬಗೆಹರಿಸಲು ನಿರ್ಧರಿಸಿದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸರ್ವೆ ನಡೆಸಿದರು. ಸರ್ಕಾರದ ಅಧಿಕೃತ ದಾಖಲೆಗಳನ್ವಯ ಸ್ಮಶಾನಕ್ಕೆ ಮೀಸಲಿಟ್ಟ 0.13 ಸೆಂಟ್ ಜಾಗವನ್ನು ಅಳತೆ ಮಾಡಿ, ಅರಣ್ಯ ಭೂಮಿಯಿಂದ ಪ್ರತ್ಯೇಕಿಸಲಾಗಿದೆ. ಈ ಮೂಲಕ ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದ ಸ್ಮಶಾನ ಭೂಮಿಯ ಹಕ್ಕನ್ನು ಸ್ಪಷ್ಟಪಡಿಸಲಾಗಿದೆ.
ಈ ಮಹತ್ವದ ಜಂಟಿ ಸರ್ವೆ ಕಾರ್ಯಾಚರಣೆಯ ಸಂದರ್ಭದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಆರ್. ಸುಮೇಶ್, ಗ್ರಾಮ ಆಡಳಿತ ಅಧಿಕಾರಿಗಳಾದ ಸಂತೋಷ್ ಮತ್ತು ಸೋನು, ಸರ್ವೆ ಇಲಾಖೆಯ ಅಧಿಕಾರಿ ರವಿ, ಅರಣ್ಯ ಇಲಾಖೆಯ ಅಧಿಕಾರಿ ದೇವಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ರವಿ ಸ್ಥಳದಲ್ಲಿ ಇದ್ದರು.
ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಮಾರಸ್ವಾಮಿ ಮತ್ತು ಪಂಚಾಯತ್ ಸಿಬ್ಬಂದಿ ವರ್ಗದವರು ಭಾಗವಹಿಸಿ, ಸರ್ವೆ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ನೋಡಿಕೊಂಡರು. ಅಧಿಕಾರಿಗಳ ಈ ಸಮನ್ವಯದ ಕ್ರಮದಿಂದಾಗಿ ಸ್ಮಶಾನ ಭೂಮಿಯ ಗಡಿ ಗುರುತಿಸುವಿಕೆ ಕಾರ್ಯವು ಯಶಸ್ವಿಯಾಗಿ ಪೂರ್ಣಗೊಂಡಿತು.
ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಸಿಬ್ಬಂದಿ, ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net