ಕಾಂಗ್ರೆಸ್ ಅಪಪ್ರಚಾರದ ವಿರುದ್ಧ ಜಾಗೃತಿ ಮೂಡಿಸಬೇಕು

ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ವಿಬಿ ಜಿ ರಾಮ್ ಜಿ ಬಗ್ಗೆ ಏರ್ಪಡಿಸಿದ್ದ ಜಿಲ್ಲಾ ಸಮಾವೇಶದಲ್ಲಿ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ರಾಬಿನ್ ದೇವಯ್ಯ, ಅಪ್ಪಚ್ಚು ರಂಜನ್, ಪ್ರೀತಂ ಗೌಡ, ನಾಪಂಡ ರವಿ ಕಾಳಪ್ಪ, ಸುನಿಲ್ ಸುಬ್ರಹ್ಮಣಿ ಇದ್ದರು.
ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ವಿಬಿ ಜಿ ರಾಮ್ ಜಿ ಬಗ್ಗೆ ಏರ್ಪಡಿಸಿದ್ದ ಜಿಲ್ಲಾ ಸಮಾವೇಶದಲ್ಲಿ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ರಾಬಿನ್ ದೇವಯ್ಯ, ಅಪ್ಪಚ್ಚು ರಂಜನ್, ಪ್ರೀತಂ ಗೌಡ, ನಾಪಂಡ ರವಿ ಕಾಳಪ್ಪ, ಸುನಿಲ್ ಸುಬ್ರಹ್ಮಣಿ ಇದ್ದರು.
Published on
ಮಡಿಕೇರಿ:
ಕೇಂದ್ರ ಸರ್ಕಾರ ರೂಪಿಸಿರುವ ವಿಬಿ ಜಿ ರಾಮ್ ಜಿ ಕಾಯ್ದೆ ಜನಪರ ಕಾರ್ಯಕ್ರಮವಾಗಿದ್ದು ಇದರ ಬಗ್ಗೆ ಕಾಂಗ್ರೆಸ್‌ನ ಅಪಪ್ರಚಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ಹೇಳಿದರು. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ವಿಬಿ ಜಿ ರಾಮ್ ಜಿ ಬಗ್ಗೆ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರ ರೂಪಿಸಿದ ವಿಬಿ ಜಿ ರಾಮ್ ಜಿ ಗೆ ಸಂಸತ್‌ನ ಎರಡೂ ಸದನಗಳಲ್ಲೂ ಒಪ್ಪಿಗೆ ಸಿಕ್ಕಿದ್ದು ಕಾಯ್ದೆಯಾಗಿ ಜಾರಿಗೆ ಬಂದಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಜವಾಹರ್ ರೋಜ್‌ಗಾರ್ ಯೋಜನೆ ಆರಂಭಿಸಲಾಯಿತು. 2005ರಲ್ಲಿ ಇದು ನರೇಗಾ ಯೋಜನೆಯಾಗಿ ಬದಲಾಯಿತು. 2009ರಲ್ಲಿ ಮನರೆಗಾ ಯೋಜನೆ ಎಂದು ಮಾರ್ಪಾಡು ಮಾಡಲಾಯಿತು. ಹೀಗೆ ಈ ಯೋಜನೆಗೆ ಕಾಲಕ್ಕೆ ತಕ್ಕಂತೆ 4 ಬಾರಿ ಕಾಯಕಲ್ಪ ನೀಡಲಾಗಿದೆ. ಇದೀಗ ವಿಕಸಿತ ಭಾರತ ಪರಿಕಲ್ಪನೆ ಅಡಿಯಲ್ಲಿ ಒಂದಿಷ್ಟು ಮಾರ್ಪಾಡು ಮಾಡಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೆ ತರಲಾಗಿದೆ. ಹಾಗಾಗಿ ಹೆಸರು ಬದಲಾವಣೆ ಹೊಸದಲ್ಲ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ಕನಸು ಕಂಡಿದ್ದ ಗಾಂಧೀಜಿ ಕನಸು ನನಸು ಮಾಡುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ತಪ್ಪನ್ನು ಸರಿಪಡಿಸುವ ನಿಟ್ಟಿನಲ್ಲಿ ಬಿಜೆಪಿ ಈ ಕೆಲಸ ಮಾಡಿದೆ. ಈ ಕಾಯ್ದೆಗೆ ಬೆಂಬಲ ಕೊಡುವ ನಿಟ್ಟಿನಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರದಲ್ಲಿ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಪರ ನಿರ್ಣಯ ಮಾಡಬೇಕಿದೆ. ಮುಂಬರುವ ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಕಾಯ್ದೆಯ ಅನುಕೂಲಗಳ ಬಗ್ಗೆ ಮಾಹಿತಿಯನ್ನು ಜಾಬ್ ಕಾರ್ಡ್ ಹೊಂದಿರುವರು ಮತ್ತು ಎಲ್ಲಾ ಗ್ರಾಮಸ್ಥರಿಗೆ ತಲುಪಿಸುವಂತಾಗಬೇಕು ಎಂದು ಹೇಳಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ಬಿ.ಸಿ. ನವೀನ್ ಮಾತನಾಡಿ ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶದಿಂದ ಅಭಿವೃದ್ಧಿ ಹೊಂದಿದ ದೇಶ ಆಗಲು ಈ ಕಾಯ್ದೆ ಅತ್ಯಗತ್ಯ. ಈ ಕಾಯ್ದೆ ಬಗ್ಗೆ ಕಾಂಗ್ರೆಸ್‌ನವರು 11 ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ಬಿಜೆಪಿಯಿಂದ ತಕ್ಕ ಉತ್ತರ ಕೊಡಬೇಕು ಎಂದರು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ ಕಾಂಗ್ರೆಸ್‌ನವರು ಜನರ ತೆರಿಗೆ ಹಣ ಉಪಯೋಗಿಸಿಕೊಂಡು ಪತ್ರಿಕೆಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ. ಇದನ್ನು ಎಲ್ಲರೂ ಖಂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಹ್ಮಣಿ, ಪಕ್ಷದ ಮಾಜಿ ಅಧ್ಯಕ್ಷರಾದ ರಾಬಿನ್ ದೇವಯ್ಯ, ಬಿ.ಬಿ. ಭಾರತೀಶ್, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಮಾರ್, ಮಹೇಶ್ ಜೈನಿ, ರೀನಾ ಪ್ರಕಾಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net