ಕುಬ್ರಾಯಿಗೆ ಸಮಾಧಾನಕರ ಬಹುಮಾನ

ವಿದ್ಯಾರ್ಥಿನಿ ಕುಬ್ರಾಯಿ.
ವಿದ್ಯಾರ್ಥಿನಿ ಕುಬ್ರಾಯಿ.
Published on

ಪ್ರಮುಖ ಮುಖ್ಯಾಂಶಗಳು

  • ಮಡಿಕೇರಿ ತಾಲೂಕಿನ ಹಾಕತ್ತೂರು ಸರ್ಕಾರಿ ಪ್ರೌಢಶಾಲೆ
  • 9ನೇ ತರಗತಿ ವಿದ್ಯಾರ್ಥಿನಿ ಕುಬ್ರಾಯಿ
ನಾಪೋಕ್ಲು: ಮಡಿಕೇರಿ ತಾಲೂಕಿನ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕುಬ್ರಾಯಿ ವಿಜ್ಞಾನ ರಸಪ್ರಶ್ನೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದಾಳೆ.
ಬೆಂಗಳೂರಿನ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ 7ನೇ ವರ್ಷದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ- 2025 ಆನ್‌ಲೈನ್ ಸ್ಪರ್ಧೆಯಲ್ಲಿ ಕುಬ್ರಾಯಿ ಸಮಾಧಾನಕರ ಬಹುಮಾನ ಪಡೆದಿದ್ದಾಳೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕುಬ್ರಾಯಿ, ಮಾದಾಪುರ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಮಾಶಿತಾ ಹಾಗೂ ನಾಪೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್‌ನ ಎಂಟನೇ ತರಗತಿ ವಿದ್ಯಾರ್ಥಿ ಎ.ಟಿ.ಲವಿನ್ ದೇವಯ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net