ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ನಾಡಗೀತೆ ಮತ್ತು ಸಂವಿಧಾನ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ತಹಶೀಲ್ದಾರ್ ಶ್ರೀಧರ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಚಾಲಕರಾದ ದಮಯಂತಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಅಧ್ಯಕ್ಷ ದಿವಾಕರ, ಪ್ರಮುಖರಾದ ಕುಮಾರ, ಸಿದ್ದೇಶ್, ಚಂದನ್, ಇತರರು ಇದ್ದರು.