ಪುರಸಭೆಯಲ್ಲಿ ಗುಂಡೂರಾವ್ ಪುತ್ಥಳಿ ನಿರ್ಮಾಣ

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ದಿವಂಗತ ಆರ್.ಗುಂಡೂರಾಯರ ಪುತ್ಥಳಿ ನಿರ್ಮಾಣ ಸಂಬಂಧ ಆಯೋಜಿಸಿದ್ದ ವಿವಿಧ ಸಂಘ, ಸಂಸ್ಥೆಗಳ ಸಭೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ  ಮಾತನಾಡಿದರು. ವಿ.ಪಿ.ಶಶಿಧರ್, ಪ್ರಮೋದ್ ಮುತ್ತಪ್ಪ ಇದ್ದರು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ದಿವಂಗತ ಆರ್.ಗುಂಡೂರಾಯರ ಪುತ್ಥಳಿ ನಿರ್ಮಾಣ ಸಂಬಂಧ ಆಯೋಜಿಸಿದ್ದ ವಿವಿಧ ಸಂಘ, ಸಂಸ್ಥೆಗಳ ಸಭೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರು. ವಿ.ಪಿ.ಶಶಿಧರ್, ಪ್ರಮೋದ್ ಮುತ್ತಪ್ಪ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್ ಗೌಡ ಹೇಳಿಕೆ
  • ವಿವಿಧ ಸಂಘ ಸಂಸ್ಥೆಗಳೊಂದಿಗೆ ಸಭೆ
ಕುಶಾಲನಗರ: ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಆರ್.ಗುಂಡೂರಾವ್ ಅವರ ಪುತ್ಥಳಿ ನಿರ್ಮಿಸಲಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದರು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ದಿ.ಆರ್.ಗುಂಡೂರಾವ್ ಪುತ್ಥಳಿ ನಿರ್ಮಾಣ ಸಂಬಂಧ ಇತ್ತೀಚೆಗೆ ಆಯೋಜಿಸಿದ್ದ ವಿವಿಧ ಸಂಘ, ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದರು.
1960ರ ದಶಕದಲ್ಲಿ ಕುಶಾಲನಗರ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಗುಂಡೂರಾವ್ ಕುಶಾಲನಗರ ಮತ್ತು ಸುತ್ತಮುತ್ತ ವ್ಯಾಪ್ತಿಯ ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಅವರ ಸ್ಮರಣೆಗಾಗಿ ಪುರಸಭೆ ಆವರಣದಲ್ಲಿ ಪುತ್ಥಳಿ ನಿರ್ಮಿಸಲು ಉದ್ದೇಶಿಸಿರುವುದು ಉತ್ತಮ ವಿಚಾರ ಎಂದರು.
ಆಗಸ್ಟ್ ತಿಂಗಳಲ್ಲಿ ಗುಂಡೂರಾವ್ ಪುಣ್ಯ ಸ್ಮರಣೆ ದಿನವೇ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇಂಜಿನಿಯರ್ ಅರ್ಬಸ್ ಅಹಮದ್ ಅವರು ಪ್ರತಿಮೆ ನಿರ್ಮಾಣದ ಬಗ್ಗೆ ಸಭೆಗೆ ತಾಂತ್ರಿಕ ಮಾಹಿತಿ ಒದಗಿಸಿದರು.
ಈ ಸಂಬಂಧ ಗುಂಡೂರಾವ್ ಒಡನಾಡಿಗಳು ಹಾಗೂ ಸರ್ವ ಸಂಘ, ಸಂಸ್ಥೆಗಳ ಪ್ರಮುಖರೊಂದಿಗೆ ಅಂತಿಮವಾಗಿ ಚರ್ಚಿಸಿ ನಿರ್ಮಾಣ ಸಮಿತಿ ಒಂದನ್ನು ರೂಪಿಸಲು ಜು.28ರಂದು ಸಭೆ ನಡೆಸುವಂತೆ ನಿರ್ಧರಿಸಲಾಯಿತು.
ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಯರ ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್, ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಕ್ಷಗಳ ಪದಾಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net