ದುಬಾರೆಯಲ್ಲಿ ತೂಗುಸೇತುವೆ ನಿರ್ಮಾಣಕ್ಕೆ ಶೀಘ್ರ ಚಾಲನೆ

ಕುಶಾಲನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಪ್ರಮೋದ್ ಮುತ್ತಪ್ಪ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ. ಪಿ. ಚಂದ್ರಕಲಾ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮತ್ತಿತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್ ಗೌಡ ಭರವಸೆ
  • ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಕುಶಾಲನಗರ: ಸಮೀಪದ ತೆಪ್ಪದ ಕಂಡಿ ಬಳಿ 1.65 ಕೋಟಿ ರೂ. ವೆಚ್ಚದಲ್ಲಿ ತೋಡಿಗೆ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
ಇದರ ಬೆನ್ನಲ್ಲೇ ಮಾದಾಪಟ್ಟಣದ ಕಾಲನಿಯ 350 ಮೀಟರ್ ರಸ್ತೆಯನ್ನು 25 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಚಾಲನೆ ನೀಡಿದರು. ನಂತರ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಮೆಟ್ರಿಕ್ ಪೂರ್ವ ಪರಿಶಿಷ್ಟ ಪಂಗಡದ ವಸತಿ ನಿಲಯ ಹಾಗೂ ಕ್ರೀಡಾ ಮೈದಾನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಎಲ್ಲ ವರ್ಗದವರ ಸಮಗ್ರ ಅಭಿವೃದ್ಧಿ ಮತ್ತು ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಲಾಗುವುದು. ದುಬಾರೆಯಲ್ಲಿ ತೂಗು ಸೇತುವೆ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡುವುದಾಗಿ ತಿಳಿಸಿದರು. ಸರ್ಕಾರವು ನೀಡುವ ಹಲವು ಸೌಲಭ್ಯಗಳನ್ನು ಪಾಲಕರು ಸದ್ಬಳಕೆ ಮಾಡಿಕೊಂಡು ತಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಉತ್ತಮಗೊಳಿಸಬೇಕು ಎಂದು ಕರೆನೀಡಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ. ಪಿ. ಚಂದ್ರಕಲಾ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖರು, ಸ್ಥಳೀಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net