ಖರೀದಿಸಿದ ವಸ್ತುವನ್ನು, ಅದರ ಮೇಲೆ ಬರೆದಿರುವ ಬೆಲೆಯನ್ನು, ತೆರಿಗೆಯನ್ನು, ದಿನಾಂಕವನ್ನು, ಗುಣಮಟ್ಟವನ್ನು ಪರಿಶೀಲಿಸಬೇಕು. ಇಂದು ಪ್ಯಾಕೇಜ್, ಟ್ಯಾರಿಫ್ ಯುಗದಲ್ಲಿ ನಾವಿದ್ದೇವೆ, ದೂರ ಸಂಪರ್ಕ ವ್ಯವಸ್ಥೆಯಲ್ಲಿ ಇದು ಹೆಚ್ಚು ಬಳಕೆಯಾಗುತ್ತದೆ. ಇವುಗಳ ಬಗ್ಗೆ ಕೂಡ ಗ್ರಾಹಕರು ಜಾಗೃತರಾಗಬೇಕು ಎಂದ ಅವರು, ಗ್ರಾಹಕರ ಜವಾಬ್ದಾರಿ, ಟೆಲಿಕಾಂ ಮತ್ತು ಬ್ರಾಡ್‌ಕಾಸ್ಟಿಂಗ್‌ನಲ್ಲಿ ಶುಲ್ಕ ಹಾಗೂ ಬಿಲ್ಲಿಂಗ್ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.