ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಟಿಕೆಟ್ ಕೌಂಟರ್ ನಿರ್ಮಾಣ, ಮಾಹಿತಿ ಕೇಂದ್ರ, ಪ್ರವಾಸಿ ಮಿತ್ರ, ಆಹಾರ ಕೇಂದ್ರ, ಸಿಸಿ ಟಿವಿ ಕ್ಯಾಮರಾ ಅಳವಡಿಸುವುದು, ಸೋಲಾರ್ ಲೈಟ್ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಪುಟಾಣಿ ರೈಲು ನಿರ್ಮಾಣ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಅಗತ್ಯ ಕ್ರಮವಹಿಸುವಂತೆ ಸಲಹೆ ಮಾಡಿದರು.