ಹದಿಹರೆಯದವರೊಂದಿಗೆ ಆಪ್ತ ಸಮಾಲೋಚನೆ

ಸೋಮವಾರಪೇಟೆ ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಹಾಗೂ ಪ್ರೌಢಶಾಲೆಯಲ್ಲಿ ಹದಿಹರೆಯದ ಬಾಲಕಿಯರು ಎದುರಿಸುವ ಸವಾಲುಗಳು ವಿಷಯ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸೋಮವಾರಪೇಟೆ ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಹಾಗೂ ಪ್ರೌಢಶಾಲೆಯಲ್ಲಿ ಹದಿಹರೆಯದ ಬಾಲಕಿಯರು ಎದುರಿಸುವ ಸವಾಲುಗಳು ವಿಷಯ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Published on

ಶನಿವಾರಸಂತೆ:

ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ನೇಸರ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಹದಿಹರೆಯದ ಬಾಲಕಿಯರು ಎದುರಿಸುವ ಸವಾಲುಗಳು ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರಿನ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಾಯಕ ಉಪನ್ಯಾಸಕಿ ಪುಷ್ಪರಾಣಿ ಮಾತನಾಡಿ, ಹದಿಹರೆಯದಲ್ಲಿ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಆರೋಗ್ಯಕರ ಜೀವನ ಶೈಲಿ, ಆತ್ಮವಿಶ್ವಾಸ, ಸುರಕ್ಷತೆ ಹಾಗೂ ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವ ಕುರಿತು ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ಪಿ.ನರಸಿಂಹಮೂರ್ತಿ ಮಾತನಾಡಿ, ಹದಿಹರೆಯದ ವಿದ್ಯಾರ್ಥಿನಿಯರ ಜೀವನದ ಸರ್ವಾಂಗೀಣ ಅಭಿವೃದ್ಧಿಗೆ ಇಂತಹ ಜಾಗೃತಿ ಕಾರ್ಯಕ್ರಮಗಳು ಅಗತ್ಯ ಎಂದರು.
ನೇಸರ ಇಕೋ ಕ್ಲಬ್ ಸಂಯೋಜಕಿ ಎಚ್.ಎನ್.ಮಂಗಳಾ, ಪ್ರಾಂಶುಪಾಲ ಎಸ್.ಜೆ.ಅಶೋಕ್, ಉಪನ್ಯಾಸಕ ಸೋಮಶೇಖರ್, ಶಿಕ್ಷಕರಾದ ಸಿ.ಜೆ.ಗೋಪಾಲ್, ಭವಾನಿ, ಸರೋಜಿನಿ, ಹಸೀನಾ, ಕಸಾಪ ಹೋಬಳಿ ಅಧ್ಯಕ್ಷ ಬಿ.ಬಿ.ನಾಗರಾಜ್, ಶಿಕ್ಷಕರಾದ ಗೋಪಾಲ್ ಮಂಗಳಾ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net