ಸುಗಮ ಸಾರಿಗೆ ವ್ಯವಸ್ಥೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ಸೂಚನೆ

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಎಸ್‌ಪಿ ಕೆ. ರಾಮರಾಜನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ರಾಷ್ಟಿçÃಯ ಹೆದ್ದಾರಿ, ಲೋಕೋಪಯೋಗಿ, ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಎಸ್‌ಪಿ ಕೆ. ರಾಮರಾಜನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ರಾಷ್ಟಿçÃಯ ಹೆದ್ದಾರಿ, ಲೋಕೋಪಯೋಗಿ, ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.
Published on
ಮಡಿಕೇರಿ
ಶ್ರೀರಂಗಪಟ್ಟಣದಿAದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಿಂದ ಸಂಪಾಜೆ ವರೆಗೆ ರಸ್ತೆ ಸುರಕ್ಷತೆ ಸಂಬAಧ ಅಗತ್ಯ ಕ್ರಮಕೈಗೊಳ್ಳಬೇಕು. ಉಬ್ಬುಗಳ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ಜೀಬ್ರಾ ಕ್ರಾಸ್ ಬರೆಸುವುದು, ಬ್ಲಾಕ್ ಸ್ಪಾಟ್ ಗುರುತಿಸುವುದು, ತಿರುವುಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಎಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ ಕುಶಾಲನಗರದಿಂದ ಸಂಪಾಜೆವರೆಗೆ ರಸ್ತೆ ಸುರಕ್ಷತೆ ಸಂಬAಧಿಸಿದAತೆ ಹೆಚ್ಚಿನ ಗಮನಹರಿಸಬೇಕು. ಈ ಭಾಗದ ರಸ್ತೆಯಲ್ಲಿ ದೀಪ ಅಳವಡಿಸುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಹಾಗೂ ಉಬ್ಬುಗಳ ನಿರ್ಮಾಣ ಮಾಡಬೇಕು. ಮಡಿಕೇರಿಯಿಂದ ಬೋಯಿಕೇರಿವರೆಗೆ ಒಂದು ರೀತಿ ಒತ್ತಡದ ರಸ್ತೆಯಾಗಿದ್ದು, ಈ ಭಾಗದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಮತ್ತಷ್ಟು ನಿಗಾವಹಿಸಬೇಕು. ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ ಅಳವಡಿಸುವುದು, ಮೂರ್ನಾಡು ಗೋಣಿಕೊಪ್ಪದಲ್ಲಿ ವಾಹನ ನಿಲುಗಡೆಗೆ ಜಾಗ ಗುರುತಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಶ್ರೀರಂಗಪಟ್ಟಣದಿAದ ಬಸವನಹಳ್ಳಿ ವರೆಗೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕುಶಾಲನಗರ ದಿಂದ ಸಂಪಾಜೆ ವರೆಗೆ ಹೆದ್ದಾರಿಯಲ್ಲಿ ಅಪಘಾತ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾತನಾಡಿ ರಸ್ತೆ ಕಾಮಗಾರಿ ಯೋಜನೆ ಸಂಬAಧ ಡಿಪಿಆರ್ ಸಿದ್ದಪಡಿಸುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಗಮನಕ್ಕೆ ತರುವಂತಾಗಬೇಕು ಎಂದು ಸಲಹೆ ಮಾಡಿದರು.
ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಮಾತನಾಡಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು.
ಜಿ.ಪಂ.ಕಾರ್ಯಪಾಲಕ ಎಂಜಿನಿಯರ್ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪೊಲೀಸ್ ಅಧಿಕಾರಿ ಮೇದಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸತೀಶ(ವಿರಾಜಪೇಟೆ), ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net