ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಮುಂಗಾರು ಸಂದರ್ಭದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೆ ಮುಸುಕಿನ ಜೋಳ ಮತ್ತು ಭತ್ತ ಬೆಳೆ ಹಾನಿಯಾಗಿದ್ದು, ಸೋಮವಾರಪೇಟೆ ತಾಲೂಕಿನಲ್ಲಿ ೧೫೯ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ, ವಿರಾಜಪೇಟೆ ತಾಲೂಕಿನಲ್ಲಿ ೬೫೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ೧೪೭೦ ಹೆಕ್ಟೇರ್ ಪ್ರದೇಶದಲ್ಲಿ ಒಟ್ಟು ೨,೨೭೯ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು ೧.೯೩ ಕೋಟಿ ರೂ. ಇನ್‌ಫುಟ್ ಸಬ್ಸಿಡಿ ಬಿಡುಗಡೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.