ಕೊಡವ ಹೆರಿಟೇಜ್ ಸೆಂಟರ್‌ಗೆ ಡಿಸಿ ಭೇಟಿ

ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ವೀಕ್ಷಿಸಿದರು. ಕೆ.ಟಿ.ಪ್ರಭು, ಜತಿನ್ ಇತರರಿದ್ದರು.
ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ವೀಕ್ಷಿಸಿದರು. ಕೆ.ಟಿ.ಪ್ರಭು, ಜತಿನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Kodava Heritage Center
ಮಡಿಕೇರಿ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಡವ ಪಾರಂಪರಿಕ ಕೇಂದ್ರ (ಕೊಡವ ಹೆರಿಟೇಜ್ ಸೆಂಟರ್) ಹಾಗೂ ಕರ್ನಾಟಕ ಸುವರ್ಣ ಸಮುಚ್ಚಯ ಭವನ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ವೀಕ್ಷಿಸಿದರು.
ಕೊಡವ ಹೆರಿಟೇಜ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕಟ್ಟಡದ ಒಳಾಂಗಣ ಹಾಗೂ ಹೊರಾಂಗಣ ಅಭಿವೃದ್ಧಿ ಸೇರಿದಂತೆ ಎಲ್ಲವನ್ನೂ ಒಂದೇ ಬಾರಿ ಅಂದಾಜು ಪಟ್ಟಿ ಸಲ್ಲಿಸಿ ಹಣ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಪಾಲಕ ಎಂಜಿನಿಯರ್ ಕೆ.ಟಿ.ಪ್ರಭು ಮಾತನಾಡಿ, ಐನ್‌ಮನೆ ಮಾದರಿಯಲ್ಲಿ ಕೊಡವ ಹೆರಿಟೇಜ್ ಸೆಂಟರ್ ಅನ್ನು ನಿರ್ಮಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಐನ್‌ಮನೆಯು ಪೂಜ್ಯ ಸ್ಥಾನವನ್ನು ಹೊಂದಿದೆ. ಕೊಡವ ಸಂಸ್ಕೃತಿ ಮತ್ತು ಪರಂಪರೆಯ ಚಟುವಟಿಕೆಗಳನ್ನು ನಡೆಸಲು ಕೊಡವ ಹೆರಿಟೇಜ್ ಸೆಂಟರ್ ಸಹಕಾರಿಯಾಗಿದೆ ಎಂದು ಮಾಹಿತಿ ನೀಡಿದರು.
ಕೊಡವ ಹೆರಿಟೇಜ್ ಸೆಂಟರ್ ಮ್ಯೂಸಿಯಂ ಸಹ ಒಳಗೊಂಡಿದೆ. ಮೊದಲ ಹಂತದಲ್ಲಿ 3 ಕೋಟಿ ರೂ. ಬಿಡುಗಡೆಯಾಗಿತ್ತು. ಈಗ 4.95 ಕೋಟಿ ರೂ. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಇಇ ತಿಳಿಸಿದರು.
ಬಳಿಕ ಕರ್ನಾಟಕ ಸುವರ್ಣ ಸಮುಚ್ಚಯ ಭವನ ವೀಕ್ಷಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಬಾಕಿ ಇರುವ 1.40 ಕೋಟಿ ರೂ. ಬಿಡುಗಡೆಯಾಗಲಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾತನಾಡಿ, ಕರ್ನಾಟಕ ಸುವರ್ಣ ಸಮುಚ್ಚಯ ಭವನದಲ್ಲಿ ಕಲಾಮಂದಿರ, ಕಲಾ ಗ್ಯಾಲರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಾಹಿತ್ಯ ಅಕಾಡೆಮಿ ಕಚೇರಿಗಳು ಕರ್ನಟಕ ಸುವರ್ಣ ಸಮ್ಮುಚ್ಚಯ ಭವನಕ್ಕೆ ಸ್ಥಳಾಂತರವಾಗಲಿದೆ ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಸತೀಶ, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net