ಇದಕ್ಕೂ ಮೊದಲು ಭಾಗಮಂಡಲದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್, ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಪ್ರಕರಣ್ಜಕ್ಕೆ ಸಂಬAಧಿಸಿದAತೆ ಮ್ಯಾಜಿಸ್ಟೆçÃಟ್ ತನಿಖೆ ನಡೆಸಲಾಗುವುದು. ಅರಣ್ಯ ಇಲಾಖೆ ಅಧಿಕಾರಿಗಳು ನೀಡಿರುವ ಪ್ರಥಮ ಮಾಹಿತಿ ಪ್ರಕಾರÀ, ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆದಾಗ ರಕ್ಷಣೆಗಾಗಿ ಎನ್‌ಕೌಂಟರ್ ಮಾಡಲಾಗಿದೆ. ಸ್ಥಳದಲ್ಲಿದ್ದ ಬಂದೂಕು ಮತ್ತು ಎರಡು ಚೀಲ ಕಾಡುಪ್ರಾಣಿಗಳ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಘಟನೆ ಬಗ್ಗೆ ಈಗಾಗಲೇ ಮ್ಯಾಜಿಸ್ಟ್ರೇಟ್ ಮಟ್ಟದ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಶಾಸಕರು, ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದು, ಮೃತರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ನೀಡುವ ಕುರಿತು ವರದಿ ನೀಡಲಿದ್ದಾರೆ ಎಂದು ತಿಳಿಸಿದರು.