ಕಾರ್ಯಕ್ರಮದಲ್ಲಿ ಉಪನಿರ್ದೇಶಕ ಗಣಪತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಂಡ್ರಂಗಿ ನಾಗರಾಜ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗೇಶ್, ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹರೀಶ್ ತಮನ್ಕರ್, ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶೈನಾ, ಲಯನ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾ ಸೇರಿದಂತೆ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.