ಪ್ರಕರಣ ನಡೆದು 7 ದಿನಗಳ ನಂತರ ಸ್ಥಳಕ್ಕೆ ಸಿಸಿಎಫ್, ಡಿಸಿಎಫ್, ಎಸಿಎಫ್ ಸ್ಥಳ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ಸಂದರ್ಭ ಅರಣ್ಯ ಇಲಾಖೆಯ ವಸತಿ ಗೃಹದ ಪಕ್ಕದಲ್ಲೇ 20ಕ್ಕೂ ಹೆಚ್ಚು ತೇಗದ ಮರಗಳನ್ನು ಕಡಿದಿರುವುದು ಮೇಲಧಿಕಾರಿಗಳ ಗಮನಕ್ಕೆ ಬಂದಿದೆ. ಮರಗಳ್ಳತನದಲ್ಲಿ ಕೆಲ ಸಿಬ್ಬಂದಿ ಕೈವಾಡವಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ಕೂಡಲೆ ಅರಣ್ಯ ಸಿಬ್ಬಂದಿಯನ್ನು ವಜಾ ಮಾಡಬೇಕು. ಕೂಂಬಿಂಗ್ ನಡೆಸಿ ಮರಹನನದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ತಪ್ಪಿದಲ್ಲಿ ಸೋಮವಾರಪೇಟೆ ಅರಣ್ಯ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.