

ಜಿಲ್ಲೆಯಲ್ಲಿನ ಹೊಸ ಹೋಂ ಸ್ಟೇಗಳ ನೋಂದಣಿ ಮತ್ತು ಈಗಾಗಲೇ ಇರುವ ಹೋಂ ಸ್ಟೇಗಳಿಗೆ ಪರವಾನನೀಡುವುದು ಹಾಗೂ ಈಗಾಗಲೇ ನೋಂದಾಯಿಸಿರುವ ಹೋಂಸ್ಟೇಗಳಿಗೆ ನವೀಕರಣವನ್ನು ಮಾ.31 ರೊಳಗೆ ಪೂರ್ಣಗೊಳಿಸಬೇಕು. ಆನ್‌ಲೈನ್ ಮೂಲಕ ಪರವಾನಗಿ ನೋಂದಣಿ ಮತ್ತು ನವೀಕರಣ ಕಾರ್ಯ ಸ್ಥಗಿತವಾಗಿದ್ದು, ಖುದ್ದಾಗಿ ಸ್ಥಳಕ್ಕೆ ತೆರಳಿ, ನೋಂದಣಿ ಹಾಗೂ ನವೀಕರಣ ಕಾರ್ಯವನ್ನು ಕೈಗೊಳ್ಳಬೇಕು. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾರ್ಚ್ ಅಂತ್ಯದೊಳಗೆ ಪರಿಶೀಲಿಸಿ ಅರ್ಜಿ ವಿಲೇವಾರಿಗೆ ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.