ಮಕ್ಕಳ ರಕ್ಷಣಾ ಅಧಿಕಾರಿ ಸಚಿನ್ ಸುವರ್ಣ ಮಾತನಾಡಿ, ಉಪಕಾರ್ ಯೋಜನೆಯಡಿ ಮಾಸಿಕ ೫ ಸಾವಿರ ರೂ. ಅರ್ಹರಿಗೆ ನೀಡಲಾಗುತ್ತಿದ್ದು, ಕನಿಷ್ಠ ಮೂರು ವರ್ಷದವರೆಗೆ ಮಕ್ಕಳ ಪಾಲನೆ ಸಂಬಂಧಪಟ್ಟ ಸಂಸ್ಥೆಯವರದಾಗಿರುತ್ತದೆ. ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯಡಿ ಕೋವಿಡ್-೧೯ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ಮಗುವಿಗೆ ೧೮ ವರ್ಷ ತುಂಬುವವರೆಗೆ ಮಾಸಿಕ ರೂ.೩,೫೦೦ ನೀಡಲಾಗುತ್ತಿದ್ದು, ಈ ಯೋಜನೆಯಡಿ ಇಬ್ಬರಿಗೆ ಸಹಾಯಧನ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.