ಕಿಡಿಗೇಡಿ ವಿರುದ್ಧ ಕ್ರಮಕ್ಕೆ ಒತ್ತಾಯ

ಭಕ್ತಿ ಭಂಡಾರಿ ಬಸವಣ್ಣ ಹಾಗೂ ವಚನಕಾರ್ತಿ ಅಕ್ಕಮಹಾದೇವಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನವಾಗಿ ನಿಂದಿಸಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ದೂರು ನೀಡಲಾಯಿತು. ಹೆಚ್.ವಿ. ಶಿವಪ್ಪ, ಸಾಂಬಶಿವಯ್ಯ, ಕೆ.ಎಸ್. ಮೂರ್ತಿ, ಬಿ. ನಟರಾಜು, ಸದಾಶಿವ, ಬಸವಣ್ಣಯ್ಯ, ಮಾದಾಪಟ್ಟಣ ಮೂರ್ತಿ ಇದ್ದರು.

Published on
ಕುಶಾಲನಗರ:
ಕರ್ನಾಟಕ ಸಾಂಸ್ಕ್ರತಿಕ ನಾಯಕ, ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ ಬಸವಣ್ಣ ಹಾಗೂ ಶ್ರೇಷ್ಠ ವಚನಕಾರ್ತಿ ಅಕ್ಕಮಹಾದೇವಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನವಾಗಿ ನಿಂದಿಸಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಘಟಕಗಳ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಸಂಬAಧ ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಶುಕ್ರವಾರ ದೂರು ನೀಡಲಾಯಿತು.
ಈ ಸಂದರ್ಭ ಮಾತನಾಡಿದ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಕರ್ನಾಟಕ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಬಸವೇಶ್ವರರು ಹಾಗೂ ಅಕ್ಕಮಹಾದೇವಿ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಾಸಭಾ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಕಿರಣ್ ಗೌರಯ್ಯ, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು
ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದರು.
ಕುಶಾಲನಗರದ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಸಾಂಬಶಿವಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಕಾರ್ಯದರ್ಶಿ ಬಿ. ನಟರಾಜು, ಸಮಾಜದ ಪ್ರಮುಖರಾದ ಸದಾಶಿವ, ಬಸವಣ್ಣಯ್ಯ, ಮಾದಾಪಟ್ಟಣ ಮೂರ್ತಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net