ಹೆದ್ದಾರಿಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲು ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾ ಅಧ್ಯಕ್ಷ ಕೆ ಎನ್ ದೀಪಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾ ಅಧ್ಯಕ್ಷ ಕೆ ಎನ್ ದೀಪಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on
ಕುಶಾಲನಗರ:
ಕುಶಾಲನಗರ -ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆದ್ದಾರಿ ಗಸ್ತು ವಾಹನಗಳ ಅಧಿಕಾರಿ ಸಿಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದೇ ಈ ಮಾರ್ಗದಲ್ಲಿ ನಿರಂತರ ಅಪಘಾತಗಳು ಸಂಭವಿಸಲು ಕಾರಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾ ಅಧ್ಯಕ್ಷ ಕೆ ಎನ್ ದೀಪಕ್ ಆರೋಪಿಸಿದ್ದಾರೆ.
ಹೆದ್ದಾರಿ ಬದಿಯಲ್ಲಿ ದುರಸ್ತಿಯಾದ ವಾಹನಗಳು ನಿಲುಗಡೆಗೊಂಡು ರಸ್ತೆ ಅಪಘಾತ ಸಂಭವಿಸಿ ಪ್ರಾಣ ಹಾನಿಗಳು ಉಂಟಾಗುತ್ತಿವೆ.
ಕುಶಾಲನಗರ ಮಡಿಕೇರಿ ರಸ್ತೆಯಲ್ಲಿ ಗುಡ್ಡೆ ಹೊಸೂರು, ಆನೆಕಾಡು ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ನಿಯಮಬಾಹಿರವಾಗಿ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರ ವಹಿವಾಟು ಮಾಡುತ್ತಿದ್ದು, ಅಲ್ಲಿ ವಾಹನಗಳು ನಿಲುಗಡೆಗೊಂಡು ಆ ಮೂಲಕ ಅಪಘಾತಗಳು ಸಂಭವಿಸಲು ಕಾರಣವಾಗಿವೆ.
ಈ ಬಗ್ಗೆ ವೇದಿಕೆ ಮೂಲಕ ಸಂಬAಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಸಂಬAಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಕ್ರಮ ಮತ್ತು ನಿಯಮ ಬಾಹಿರವಾಗಿ ಹೆದ್ದಾರಿ ಬದಿಯಲ್ಲಿ ತಲೆಯೆತ್ತಿರುವ ಅಂಗಡಿಗಳನ್ನು ತಕ್ಷಣ ತೆರವುಗೊಳಿಸಬೇಕು. ಹೆದ್ದಾರಿ ಬದಿಯಲ್ಲಿ ದುರಸ್ತಿಗೆ ಈಡಾದ ವಾಹನಗಳ ನಿಲುಗಡೆ ಸಂದರ್ಭ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕುಶಾಲನಗರ, ಮಾದಾಪಟ್ಟಣ, ಗುಡ್ಡೆಹೊಸೂರು ಮತ್ತು ಕೂಡಿಗೆಯಿಂದ ಕುಶಾಲನಗರ ಹಾಗೂ ಕೊಪ್ಪ ಗಡಿಯಿಂದ ಜಿಲ್ಲೆಗೆ ಪ್ರವೇಶ ಮಾಡುವ ಪಟ್ಟಣದ ವ್ಯಾಪ್ತಿಯಲ್ಲಿ ಹೆದ್ದಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಒತ್ತುವರಿ ಮಾಡುವ ಮೂಲಕ ನಿಯಮಬಾಹಿರವಾಗಿ ಕಟ್ಟಡಗಳು ನಿರ್ಮಾಣಗೊಳ್ಳುತ್ತಿವೆ. ಈ ಸಂಬAಧ ರಾಜ್ಯ ಉಚ್ಚ ನ್ಯಾಯಾಲಯ ಕ್ರಮ ಕೈಗೊಳ್ಳಲು ಆದೇಶ ನೀಡಿದರೂ ಸ್ಥಳೀಯ ಅಧಿಕಾರಿಗಳು ಪಾಲನೆ ಮಾಡುತ್ತಿಲ್ಲ. ರಸ್ತೆ ಬದಿಯಲ್ಲಿ ವ್ಯಾಪಾರಗಳನ್ನು ಮಾಡುವ ಹಿನ್ನೆಲೆ ನಿರಂತರವಾಗಿ ಅವಘಡಗಳು ಸಂಭವಿಸಲು ಕಾರಣವಾಗಿವೆ ಎಂದರು.
ತಾಲೂಕು ಅಧ್ಯಕ್ಷ ಸಿ.ಎಂ. ಆಸೀಫ್ ಮಾತನಾಡಿ, ಹೆದ್ದಾರಿಯಲ್ಲಿ ಬೀಡಾಡಿ ದನಗಳ ಹಾವಳಿ ಅಧಿಕಗೊಂಡಿದೆ. ರಾತ್ರಿ ವೇಳೆ ಹೆದ್ದಾರಿಯಲ್ಲಿ ದನಗಳು ಓಡಾಡುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಕುಶಾಲನಗರ ಮಡಿಕೇರಿ ರಸ್ತೆಯಲ್ಲಿ ಗಣಿಗಾರಿಕೆಯ ವಸ್ತುಗಳನ್ನು ಸಾಗಿಸುವ ಸಂದರ್ಭ ವಾಹನಗಳು ಮಿತಿಮೀರಿದ ವೇಗದಲ್ಲಿ ತೆರಳುತ್ತಿವೆ ಎಂದು ಹೇಳಿದರು.
ಆನಂದ್ ಮಾತನಾಡಿ ಕುಶಾಲನಗರ ಮಡಿಕೇರಿ ರಸ್ತೆಯ ಮಾದಾಪಟ್ಟಣ ಸರ್ಕಾರಿ ಪಾಲಿಟೆಕ್ನಿಕ್ ಎದುರು ಭಾಗದಲ್ಲಿ ಮಾಂಸದ ಅಂಗಡಿಗಳು ರಸ್ತೆ ಬದಿಯಲ್ಲಿ ತಲೆಯೆತ್ತಿದ್ದು ಇದರಿಂದ ಸುಗಮ ವಾಹನ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಟಿಪ್ಪರ್‌ಗಳಲ್ಲಿ ಮಿತಿಮೀರಿದ ಜಲ್ಲಿ ಮತ್ತಿತರ ಸಾಮಗ್ರಿಗಳನ್ನು ತುಂಬಿ ಸಾಗಿಸುವ ಸಂದರ್ಭ ರಸ್ತೆಯಲ್ಲಿ ಚೆಲ್ಲಾಡಿಕೊಂಡು ತೆರಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿದ್ದು ಇದರಿಂದ ರಸ್ತೆಯಲ್ಲಿ ದ್ವಿಚಕ್ರವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮೂಲಕ ಸಂಬAಧಿಸಿದ ಅಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಮಹಿಳಾ ಕಾರ್ಯದರ್ಶಿ ಶೃತಿ ಗಿರೀಶ್, ನಗರ ಅಧ್ಯಕ್ಷ ಡಿ.ಆರ್. ಯೋಗೇಶ್, ತಾಲೂಕು ಯುವ ಅಧ್ಯಕ್ಷ ಪುನೀತ್, ಪ್ರಧಾನ ಕಾರ್ಯದರ್ಶಿ ನಂಜಪ್ಪ, ಉಪಾಧ್ಯಕ್ಷ ಪರಮೇಶ್, ಜಿ.ಎಂ. ಮುರಳಿ, ಪವನ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net