ಪ್ರವಾಸಿಗರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ನಿಷೇಧದಿಂದಾಗಿ ನೈಜ ತೊಂದರೆ ಹಾಗೂ ಅಪಾಯ ಉಂಟಾಗುತ್ತಿದೆ. ಆರೋಗ್ಯಕ್ಕೆ ಹಾನಿಕಾರಕವೆಂದು ವೈಜ್ಞಾನಿಕವಾಗಿ ಸಾಬೀತಾಗಿರುವ ತಂಪು ಪಾನೀಯಗಳು ಅದೇ ಪ್ಲಾಸ್ಟಿಕ್ ಬಾಟಲಿನಲ್ಲಿ ನಿರ್ಬಂಧವಿಲ್ಲದೆ ಮಾರಾಟವಾಗುತ್ತಿದೆ. ಇದಕ್ಕೆ ಯಾವುದೇ ಬ್ಯಾನ್‌ಗಳಿಲ್ಲ. ಆದರೆ, ಮಾನವನ ಜೀವಕ್ಕೆ ಅಗತ್ಯವಾದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳನ್ನೇ ನಿಷೇಧಿಸಿರುವುದು ಮಲತಾಯಿ ಧೋರಣೆ ತೋರಿದಂತಾಗಿದೆ. ಈ ಸಂಬಂಧ ಆದೇಶವನ್ನು ೧೫ ದಿನದೊಳಗೆ ಪುನರ್ ಪರಿಶೀಲಿಸದಿದ್ದಲ್ಲಿ ಕುಶಾಲನಗರ ಪುರಸಭೆ, ಮಡಿಕೇರಿ ನಗರಸಭೆ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.