ಮಂಜುನಾಥ್‌ಗೆ ಡಿಜಿ-ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿ

ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು (ಡಿಜಿ-ಐಜಿಪಿ) ಪ್ರಶಸ್ತಿಯನ್ನು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್‌ಗೆ ಪ್ರದಾನ ಮಾಡಿ ಗೌರವಿಸಿದರು.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು (ಡಿಜಿ-ಐಜಿಪಿ) ಪ್ರಶಸ್ತಿಯನ್ನು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್‌ಗೆ ಪ್ರದಾನ ಮಾಡಿ ಗೌರವಿಸಿದರು.
Published on
ಸಿದ್ದಾಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರತಿಷ್ಠಿತ ಡಿಜಿ-ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿಗೆ ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಇ.ಮಂಜುನಾಥ್ ಭಾಜನರಾಗಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕರು (ಡಿಜಿ-ಐಜಿಪಿ) ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಉತ್ತಮ ಸೇವೆ ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ಕಾರ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಈ ಗೌರವ ನೀಡಲಾಗಿದೆ.
ಇ.ಮಂಜುನಾಥ್ ಅವರು ಸಿದ್ದಾಪುರ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸಂಚಾರ ಶಿಸ್ತು, ಶಾಲಾ-ಕಾಲೇಜುಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವ ಕಾರ್ಯಗಳಿಂದ ಮೆಚ್ಚುಗೆ ಗಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net