ಆಟೋಟದಲ್ಲಿ ಸಂಭ್ರಮಿಸಿದ ಅಂಗವಿಕಲ ಮಕ್ಕಳು

ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಅಂಗವಿಕಲ ಮಕ್ಕಳು.
ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಅಂಗವಿಕಲ ಮಕ್ಕಳು.
Published on

ಪ್ರಮುಖ ಮುಖ್ಯಾಂಶಗಳು

  • ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಅಂಗವಿಕಲ ಮಕ್ಕಳಿಗೆ ಆಯೋಜನೆ
ಸಿದ್ದಾಪುರ : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಅಂಗವಿಕಲ ಮಕ್ಕಳಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಂಗವಿಕಲ ಮಕ್ಕಳು ಪಾಲ್ಗೊಂಡು ಸಂಭ್ರಮಿಸಿದರು.
ಪೊನ್ನಂಪೇಟೆ ಶಿಶು ಅಭಿವೃದ್ಧಿ ಇಲಾಖೆ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಸತ್ಯಸಾಯಿ ಸೇವಾ ಟ್ರಸ್ಟ್, ಪಾಲಿಬೆಟ್ಟ ಚೆಶೈರ್ ಹೋಮ್, ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆ, ತಾಲೂಕು ಎಂಆರ್‌ಡಬ್ಲುೃ, ವಿಆರ್‌ಡಬ್ಲುೃ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಚೆಶೈರ್ ಹೋಮ್, ಆಡಳಿತ ಮಂಡಳಿ ಅಧ್ಯಕ್ಷೆ ಗೀತಾ ಚೆಂಗಪ್ಪ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿದರು. ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮಾತನಾಡಿ, ಅಂಗವಿಕಲರ ಪೋಷಣೆ ಜವಾಬ್ದಾರಿಯಲ್ಲಿ ತ್ಯಾಗವೇ ಹೆಚ್ಚಿರುತ್ತದೆ. ಪಾಲಕರು, ಕುಟುಂಬ ಹಾಗೂ ವಿಶೇಷ ಶಾಲೆಗಳಲ್ಲಿನ ಸಿಬ್ಬಂದಿ ಅಂಗವಿಕಲರಿಗೆ ನೆರವಾಗಿರುವುದು ಗೌರಯುತವಾಗಿದೆ. ಇದೇ ರೀತಿ ಪ್ರೋತ್ಸಾಹ ಮುಖ್ಯ ಎಂದರು.
ಚೆಶೈರ್ ಹೋಮ್ ಮುಖ್ಯ ಶಿಕ್ಷಕ ಶಿವರಾಜ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ, ಗೋಣಿಕೊಪ್ಪ ಗ್ರಾ.ಪಂ. ಪಿಡಿಒ ಕುಟ್ಟಂಜೀಟ್ಟೀರ ತಿಮ್ಮಯ್ಯ, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೂಣಚ್ಚ, ಸಹಾಯಕ ಶಿಶು ಯೋಜನಾಧಿಕಾರಿ ರೀತಾ, ಗ್ರಾ.ಪಂ. ಸದಸ್ಯೆ ನೂರೇರ ರತಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕಾರ್ಯಕ್ರಮ ನಿರ್ವಾಹಕ ಬೋರಪ್ಪ, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಚ್.ಕೆ.ಕುಮಾರ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಳಿನಾಕ್ಷಿ, ಖಜಾಂಚಿ ರಾಜೇಶ್ವರಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net