ಉತ್ತಮ ಭವಿಷ್ಯಕ್ಕೆ ಶಿಸ್ತು , ಶ್ರಮ ಅಗತ್ಯ

ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಪ್ರೇರಣಾ ಕಾರ್ಯಗಾರದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಸ್ವಾಮಿ ಪಾರಹಿತಾನಂದ ಮಹಾರಾಜ್, ಆನಂದ್, ಮಹೇಶ್, ಉತ್ತಪ್ಪ ಇತರರಿದ್ದರು.
ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಪ್ರೇರಣಾ ಕಾರ್ಯಗಾರದಲ್ಲಿ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಸ್ವಾಮಿ ಪಾರಹಿತಾನಂದ ಮಹಾರಾಜ್, ಆನಂದ್, ಮಹೇಶ್, ಉತ್ತಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಪೊನ್ನಣ್ಣ
  • ರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಟಿ ಮತ್ತು ಎಂ ಸಿ ವಿದ್ಯಾರ್ಥಿಗಳಿಗೆ
  • ಶ್ರೀ ರಾಮಕೃಷ್ಣ ಶಾರದಾಶ್ರಮ
ಪೊನ್ನಂಪೇಟೆ: ನಿಮ್ಮ ಯಶಸ್ಸು ನಿಮ್ಮ ಕೈಯಲ್ಲೇ ಇದ್ದು, ಅದನ್ನು ಬೇರೆಲ್ಲಿಯೂ ಹುಡುಕುವ ಅವಶ್ಯಕತೆ ಇಲ್ಲ ಎಂದು ಶಾಸಕ ಪೊನ್ನಣ್ಣ ಹೇಳಿದರು.
2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಫಲಿತಾಂಶ ಉತ್ತಮ ಪಡಿಸುವ ಸಲುವಾಗಿ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಟಿ ಮತ್ತು ಎಂ ಸಿ ವಿದ್ಯಾರ್ಥಿಗಳಿಗೆ ಗುರುವಾರ ಇಲ್ಲಿನ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಒಂದು ದಿನದ ವಿಶೇಷ ಪ್ರೇರಣಾ ಕಾರ್ಯಗಾರದಲ್ಲಿ ಮಾತನಾಡಿದರು. ನಾನು ಏನು ಸಾಧಿಸುತ್ತೇನೆ ಎಂದು ಗುರಿ ಇಟ್ಟುಕೊಂಡರೆ ಖಂಡಿತವಾಗಿಯೂ ಜೀವನದಲ್ಲಿ ಏನಾದರೂ ಸಾಧಿಸಬಹುದು. ಎಷ್ಟೇ ಬುದ್ಧಿವಂತರಾಗಿದ್ದರೂ ಸರಿಯಾಗಿ ಅಭ್ಯಾಸ ಮಾಡದಿದ್ದರೆ ಉತ್ತಮ ಅಂಕ ಗಳಿಸಲು ಸಾಧ್ಯವಿಲ್ಲ. ಶಿಸ್ತು ಮತ್ತು ಶ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಪರಹಿತಾನಂದ ಮಹಾರಾಜ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ವಿ.ಆನಂದ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ.ಮಹೇಶ್, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಬಿಂದು, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ವಿರಾಜಪೇಟೆ ತಾಲೂಕು ಅಧ್ಯಕ್ಷ ಬಿ.ಪಿ.ಉತ್ತಪ್ಪ, ಇಸಿಒ ಕವಿತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net