ಕೊಡಗು ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಸಂಬAಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರುಗಳು ಸ್ಪಷ್ಟ ಸೂಚನೆ ನೀಡುವ ಮೂಲಕ ಸಾರ್ವಜನಿಕರ ಹಿತ ಕಾಯಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ಒತ್ತಾಯಿಸಿದೆ. ಶುಕ್ರವಾರ ವಿರಾಜಪೇಟೆ ರಸ್ತೆ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎA. ಪರಮೇಶ್ವರ ಅತಿ ಮಳೆಯ ನೆಪವೊಡ್ಡಿ ರಸ್ತೆಗಳ ಗುಂಡಿ ಮುಚ್ಚುವ ತೇಪೆ ಕಾರ್ಯವನ್ನು ಇತ್ತೀಚೆಗಷ್ಟೇ ಆರಂಭಿಸಲಾಗಿದೆ. ಈ ಕಾಮಗಾರಿಯಲ್ಲಿ ನವೀನ ತಂತ್ರಜ್ಞಾನ ಬಳಸದೇ ಹಳೆಯ ಕ್ರಮ ಅನುಸರಿಸಲಾಗುತ್ತಿದೆ. ಇದು ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.