ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಹಣ್ಣು ವಿತರಣೆ

ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರಸಂತೆ ಭಾಗದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಮಸಾಶನ ಪಡೆಯುತ್ತಿರುವ ಫಲಾನುಭವಿಗಳ ಮನೆಗಳಿಗೆ ತೆರಳಿ ಗುರುವಾರ ಹಣ್ಣುಗಳನ್ನು ವಿತರಣೆ ಮಾಡಲಾಯಿತು. ಜಯಶ್ರೀ, ಪೂರ್ಣಿಮಾ ಕಿರಣ್, ಸರೋಜಾ ಶೇಖರ್, ಭಾಗ್ಯಾ, ಕವನ್ ಇತರರಿದ್ದರು.
ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರಸಂತೆ ಭಾಗದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಮಸಾಶನ ಪಡೆಯುತ್ತಿರುವ ಫಲಾನುಭವಿಗಳ ಮನೆಗಳಿಗೆ ತೆರಳಿ ಗುರುವಾರ ಹಣ್ಣುಗಳನ್ನು ವಿತರಣೆ ಮಾಡಲಾಯಿತು. ಜಯಶ್ರೀ, ಪೂರ್ಣಿಮಾ ಕಿರಣ್, ಸರೋಜಾ ಶೇಖರ್, ಭಾಗ್ಯಾ, ಕವನ್ ಇತರರಿದ್ದರು.
Published on
ಶನಿವಾರಸಂತೆ: ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರಸಂತೆ ಭಾಗದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಮಸಾಶನ ಪಡೆಯುತ್ತಿರುವ ಫಲಾನುಭವಿಗಳ ಮನೆಗಳಿಗೆ ತೆರಳಿ ಗುರುವಾರ ಹಣ್ಣುಗಳನ್ನು ವಿತರಣೆ ಮಾಡಲಾಯಿತು.
ನಂತರ ಮಾತನಾಡಿದ ಧರ್ಮಸ್ಥಳ ಸಂಘದ ವಲಯ ಮೇಲ್ವಿಚಾರಕಿ ಜಯಶ್ರೀ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜತೆಯಲ್ಲಿ, ವೃದ್ಧರಿಗೆ ಮಸಾಶನ ಹಾಗೂ ಧಾರ್ಮಿಕ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ. ಮಹಿಳೆಯರು ಹಾಗೂ ವೃದ್ಧರ ಆತ್ಮಸ್ಥೈರ್ಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಸದೃಢರಾದರೆ ಸಮಾಜದಲ್ಲಿ ಸುಖಿ ಜೀವನ ನಡೆಸಬಹುದೆಂಬ ಮೂಲ ಉದ್ದೇಶ ಇಟ್ಟುಕೊಂಡು ಗ್ರಾಮಾಭಿವೃದ್ಧಿ ಯೋಜನೆಯನ್ನು ಸ್ಥಾಪಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಕನಸು ಇಂದು ನನಸಾಗಿದೆ ಎಂದರು.
ಧರ್ಮಸ್ಥಳ ಸಂಘವು ಇಂದು ಗ್ರಾಮೀಣ ಪ್ರದೇಶಗಳಲ್ಲಿ ಹತ್ತು ಹಲವು ಯೋಜನೆಯ ಮೂಲಕ ಗ್ರಾಮೀಣ ಭಾಗವನ್ನು ಅಭಿವೃದ್ಧಿಗೊಳಿಸಲು ಸರ್ಕಾರದ ಜತೆ ಕೈ ಜೋಡಿಸುತ್ತಿರುವ ಜತೆಯಲ್ಲಿ ಧಾರ್ಮಿಕ, ಜಾತ್ಯಾತೀತವಾಗಿ ಧರ್ಮದ ತಳಹದಿಯಲ್ಲಿ ಬೆರೆಯಲು ಅವಕಾಶ ಮಾಡಿಕೊಡುತ್ತಿದೆ. ಹೇಮಾವತಿ ಅಮ್ಮನವರ ಹುಟ್ಟುಹಬ್ಬದ ಪ್ರಯುಕ್ತ ಈ ಭಾಗದಲ್ಲಿ ಧರ್ಮಸ್ಥಳ ಸಂಘದ ಯೋಜನೆಯ ಒಂದು ಭಾಗವಾದ ವೃದ್ಧರಿಗೆ ಯೋಜನೆಯ ಮಸಾಶನ ಪಡೆಯುತ್ತಿರುವ ಮನೆಗಳಿಗೆ ತೆರಳಿ ಹಣ್ಣು ವಿತರಣೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಪೂರ್ಣಿಮಾ ಕಿರಣ್, ಒಕ್ಕೂಟದ ಅಧ್ಯಕ್ಷರಾದ ಭಾಗ್ಯಾ ಮತ್ತು ಸರೋಜಾ ಶೇಖರ್, ಸೋಮವಾರಪೇಟೆ ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕವನಾ, ವಲಯದ ಮೇಲ್ವಿಚಾರಕಿ ಜಯಶ್ರೀ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net