ಹೋಂಸ್ಟೇ ಮತ್ತು ರೇಸಾರ್ಟ್‌ನಲ್ಲಿ ಸುರಕ್ಷತೆ ಸಂಬಂಧ ಸಿಸಿಟಿವಿ, ನೋಂದಣಿ ಪುಸ್ತಕ, ದೂರು ನಿರ್ವಹಣಾ ಪುಸ್ತಕ, ವಿದೇಶಿ ಪ್ರವಾಸಿಗರು ಆಗಮಿಸಿದಲ್ಲಿ ಅವರ ಪಾಸ್‌ಪೋರ್ಟ್, ವಿಮಾನ ಟಿಕೆಟ್, ಗುರುತಿನ ಚೀಟಿ, ಹಾಗೆಯೇ ವಿದೇಶಿ ಪ್ರವಾಸಿಗರ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡುವುದು ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಕಸ ವಿಲೇವಾರಿ ಸಂಬಂಧ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು. ಹೋಂಸ್ಟೇ/ ಬಾರ್ ರೆಸಾರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಬಗ್ಗೆಯೂ ಸಹ ಸಂಪೂರ್ಣ ಮಾಹಿತಿ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.