ಇದೇ ಸಂದರ್ಭದಲ್ಲಿ ಸಮ್ಮೇಳನದ ಯಶಸ್ವಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸಬಾಸ್ಟೀನ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಎ.ಮುನಿರ್ ಆಹ್ಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್‌ಕುಮಾರ್, ಸುಂಟಿಕೊಪ್ಪ ಗ್ರಾ.ಪಂ.ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್, ಸುಂಟಿಕೊಪ್ಪ ಹೋಬಳಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅನಿಲ್‌ಕುಮಾರ್, ಮಹಿಳಾ ಕಾರ್ಯದರ್ಶಿ ಲೀಲಾ ಮೇದಪ್ಪ, ನಿಕಟಪೂರ್ವ ಎಂ.ಎಸ್.ಸುನೀಲ್, ಸುಂಟಿಕೊಪ್ಪ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, 7ನೇ ಹೊಸಕೋಟೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಂದೀಶ್, ಕೊಡಗರಹಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವೀಶ್, ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋ ಚಾಲಕರ ಸಂಘದ ಅಧ್ಯಕ್ಷ ಕೆ.ಎಚ್.ಶರೀಫ್, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಕಸಾಪ ವಿವಿಧ ಪದಾಧಿಕಾರಿಗಳು ಕಸಾಪ ಸದಸ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇತರರಿದ್ದರು.