ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ

ಹ್ಯಾಂಡ್ ಬಾಲ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಾಟಿ ಬಾಯ್ಸ ತಂಡ.
ಹ್ಯಾಂಡ್ ಬಾಲ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಾಟಿ ಬಾಯ್ಸ ತಂಡ.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ
ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ, ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.
ಹ್ಯಾಂಡ್ ಬಾಲ್‌ನ ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ನಾಟಿ ಬಾಯ್ಸ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟ ಪಂದ್ಯದಲ್ಲಿ ಕಿಶೋರ್ ರೈ ನಾಯಕತ್ವದ ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಲೀಗ್ ಮಾದರಿಯಲ್ಲಿ ನಾಟಿ ಬಾಯ್ಸ, ಯಂಗ್ ಸ್ಪೈಡರ್ಸ್, ಮಡ್ ಕಮಾಂಡೋಸ್, ಮಡ್ ಫೀಲ್ಡರ್ಸ್, ಮಡ್ ಬಾಯ್ಸ, ರೈತ ಮಕ್ಕಳು ಸೇರಿದಂತೆ ೬ ತಂಡಗಳು ಸೆಣಸಾಟ ನಡೆಸಿತ್ತು.
ಸಮಾಜ ಸೇವಕ ಹಾಗೂ ಬೆಳೆಗಾರರಾದ ಮಲ್ಲನ ಆನಂದ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಸಂಜೆ ತಾಳತ್ತಮನೆಯ ಸಮೀಪದ ಸ್ವಾಗತ್ ಕನ್ವೆಷನಲ್ ಹಾಲ್‌ನಲ್ಲಿ ನಡೆದ ಸಮಾರೋಪ ಸಮಾರಂಭ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ, ಕಾಂಗ್ರೆಸ್ ಮುಖಂಡ ಜಾನ್ಸನ್ ಪಿಂಟೋ ಇತರರಿದ್ದರು.
ಕಾರ್ಯಕ್ರಮದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ, ಮಲ್ಲನ ಆನಂದ್, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಮತ್ತು ಸಂಚಾಲಕರಾದ ಆರ್.ಆರ್.ಮುನೋಜ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net