ಈ ಕುರಿತು ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಇದ್ದು, ರಸಗೊಬ್ಬರ ಪೂರೈಸಲಾಗುತ್ತಿದೆ. ಯೂರಿಯಾ, ಡಿಐಪಿ, ಎಂಒಪಿ, ಕಾಂಪ್ಲೆಕ್ಸ್, ಎಸ್‌ಎಸ್‌ಪಿ ಸೇರಿದಂತೆ ಎಲ್ಲಾ ರೀತಿಯ ರಸಗೊಬ್ಬರವನ್ನು ತರಿಸಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ ೨,೪೫೩ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಯಾಗಿದ್ದು, ಇದುವರೆಗೆ ೪೦,೯೭೧ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದ್ದು, ಇದರಲ್ಲಿ ೨,೧೮೯ ರಸಗೊಬ್ಬರ ವಿತರಿಸಲಾಗಿದೆ ಎಂದು ಹೇಳಿದರು.