ಶುಕ್ರವಾರ, ಶನಿವಾರ ಜಿಲ್ಲಾ ಸಾಹಿತ್ಯ ಸಮ್ಮೇಳನ

ಕೇಶವ ಕಾಮತ್
ಕೇಶವ ಕಾಮತ್
Published on
ಮಡಿಕೇರಿ:
ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ (ಮೇ29) ಮತ್ತು ಶನಿವಾರ (ಮೇ30) ಸುಂಟಿಕೊಪ್ಪದ ಖಾಸಗಿ ಸಭಾಂಗಣದಲ್ಲಿ ನಿರ್ಮಿಸಲಾಗುವ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸುಂಟಿಕೊಪ್ಪ ಮೂಲದವರೇ ಆದ ಅಬ್ದುಲ್ ರಶೀದ್ ಕಾರ್ಯನಿರ್ವಹಿಸಲಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ ಹಾಗೂ ಪರಿಷತ್ತಿನ ಧ್ವಜಾರೋಹಣೆಯೊಂದಿಗೆ ಸಮ್ಮೇಳನ ಪ್ರಾರಂಭವಾಗಲಿದೆ. ಸುಂಟಿಕೊಪ್ಪ ಭಾಗದ ಖ್ಯಾತನಾಮರ ಹೆಸರಿನಲ್ಲಿ ಅವರ ನೆನಪಿಗಾಗಿ 19 ದ್ವಾರಗಳನ್ನು ನಿರ್ಮಿಸಲಾಗಿದ್ದು ಸಮಾಜದ ಗಣ್ಯರು ಇವುಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಸÀರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ರಸ್ತೆಗಾಗಿ ಗದ್ದೆ ಹಳ್ಳದ ಗುಂಡುಗುಟ್ಟಿ ಮಂಜನಾಥಯ್ಯ ಸಭಾಂಗಣದವರೆಗೆ ಸಮ್ಮೇಳನ ಅಧ್ಯಕ್ಷರ ವರ್ಣರಂಜಿತ ಮೆರವಣಿಗೆ ನಡೆಯಲಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
10.30 ನಡೆಯುವ ಉದ್ಘಾಟನಾ ಸಮಾರಂಭವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸುವರು. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಂಎಲ್‌ಸಿ ಸುಜಾಕುಶಾಲಪ್ಪ ಸೇರಿದಂತೆ ಗಣ್ಯರು ಪಾಲ್ಗೊಳ್ಳುವರು. ಸಾಹಿತ್ಯ ಸೌಹಾರ್ದ ಸ್ಮರಣ ಸಂಚಿಕೆ, ವಿವಿಧ ಲೇಖಕರ ಪುಸ್ತಕಗಳನ್ನು ಇದೇ ಸಂದರ್ಭ ಬಿಡುಗಡೆ ಮಾಡಲಾಗುವುದು.
ಮುಖ್ಯ ಭಾಷಣಕಾರರಾಗಿ ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಮಾತನಾಡಲಿದ್ದಾರೆ. ನಂತರ ಜಿಲ್ಲೆಯ ಗಾಯಕರಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಈ ಬಾರಿ ವಿಚಾರಗೋಷ್ಠಿಯಲ್ಲಿ ಆಧುನಿಕತೆಯ ವಿಚಾರಗಳಿಗೆ ಆದ್ಯತೆ ಕೊಡಲಾಗಿದೆ. ಪ್ರವಾಸೋದ್ಯಮ, ಕೈಗಾರಿಕೆಗಳ ಬೆಳವಣಿಗೆಗೆ ಸಂಬAಧಿಸಿದ ವಿಷಯಗಳ ಮೇಲೆ ಗೋಷ್ಠಿಗಳು ಇರಲಿದೆ. ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿರುವ ದತ್ತಿದಾನಿಗಳು, ತಾಲೂಕು ಮತ್ತು ಹೋಬಳಿ ಅಧ್ಯಕ್ಷರುಗಳನ್ನು ಸನ್ಮಾನಿಸುವ ಕಾರ್ಯಕ್ರಮವೂ ನಡೆಯಲಿದೆ. ಸಂಜೆ 6 ಗಂಟೆಗೆ ಜಿಲ್ಲೆಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶನಿವಾರ ವಿಚಾರಗೋಷ್ಠಿ, ಕವಿಗೋಷ್ಠಿ ಆಯೋಜಿಸಲಾಗಿದೆ. ಬಹಿರಂಗ ಆಧಿವೇಶನದಲ್ಲಿ ಕೊಡಗಿನ ಸಮಸ್ಯೆಗಳ ಕುರಿತು ನಿರ್ಣಯ ಮಂಡಿಸಿ ಸಂಬAಧಪಟ್ಟ ಇಲಾಖೆ ಮತ್ತು ಸರ್ಕಾರಕ್ಕೆ ನಿರ್ಣಯ ಸಲ್ಲಿಸಲಾಗುವುದು. ಜಿಲ್ಲೆಯ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯಲಿದೆ. ನಂತರ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ಕರ್ನಾಟಕ ಸÀರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಸಮ್ಮೇಳನದ ಸಮಾರೋಪÀ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಸ್ವಾಗತ ಸಮಿತಿ ಉಪಾಧ್ಯಕ್ಷ ಎ. ಲೋಕೇಶ್ ಕುಮಾರ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ನಾಗೇಶ್, ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಸಬಾಸ್ಟಿನ್, ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಬಿ.ಸಿ. ದಿನೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net