ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆ ವ್ಯವಸ್ಥೆಗೆ ಸಂಬಂಧಿಸಿದಂತೆ ಪಟ್ಟಣದ ಮೂರ್ನಾಡು ಜಂಕ್ಷನ್‌ನಿಂದ ದೊಡ್ಡಟ್ಟಿ ಚೌಕಿ ವರೆಗೆ ದ್ವಿಮುಖ ಸಂಚಾರ ವ್ಯವಸ್ಥೆಮಾಡಿ ಪಾರ್ಕಿಂಗ್ ನಿಷೇಧಿಸುವುದರಿಂದ ಗೋಣಿಕೊಪ್ಪದ ಕಡೆಗೆ ತೆರಳುವ ವಾಹನಗಳು ಮತ್ತು ಗೋಣಿಕೊಪ್ಪದಿಂದ ಮಡಿಕೇರಿ ಕಡೆಗೆ ತೆರಳುವ ವಾಹನಗಳಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಸುಗಮ ಸಂಚಾರಕ್ಕೆ ಅವಕಾಶವಾಗುತ್ತದೆ. ಹಾಗೆಯೇ ಗಡಿಯಾರ ಕಂಬದಿಂದ ಬದ್ರಿಯಾ ಜಂಕ್ಷನ್ ವರೆಗೆ ದ್ವಿಮುಖ ಸಂಚಾರಕ್ಕೆ ಅವಕಾಶವಾಗುವುದರಿಂದ ಹಾಗೂ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸುವುದರಿಂದ ಪೆರುಂಬಾಡಿ, ಮೀನುಪೇಟೆ, ಆರ್ಜಿ, ಬೇಟೋಳಿ ಕಡೆಗಳಿಂದ ತೆರಳಲು ಅವಕಾಶವಾಗುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ತಾತ್ಕಾಲಿಕವಾಗಿ ಮೂರು ತಿಂಗಳವರೆಗೆ ದ್ವಿಮುಖ ಸಂಚಾರ ನಿಯಮ ಜಾರಿಗೊಳಿಸಿ, ಪಾರ್ಕಿಂಗ್ ನಿಷೇಧಿಸಲಾಗಿದೆ ಎಂದು ಕೆ.ಟಿ.ಪ್ರಭು ಹೇಳಿದರು.