ಗುಡ್ಡೆಹೊಸೂರು ಪಂಚಾಯಿತಿಗೆ ಡಾ. ಪ್ರಸಾದ್ ಭೇಟಿ

ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪ್ರಸಾದ್ ಗುಡ್ಡೆಹೊಸೂರು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಕುಡಿಯುವ ನೀರಿನ ಸರಬರಾಜು ಘಟಕದ ಪರಿಶೀಲನೆ ನಡೆಸಿದರು. ಆನಂದ್ ಪ್ರಕಾಶ್ ಮೀನಾ, ಪರಮೇಶ್, ಕಿರಣ್ ಗೌರಯ್ಯ, ವೀರೇಂದ್ರ, ಸುಮೇಶ್ ಮತ್ತಿತರರು ಇದ್ದರು.
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪ್ರಸಾದ್ ಗುಡ್ಡೆಹೊಸೂರು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಕುಡಿಯುವ ನೀರಿನ ಸರಬರಾಜು ಘಟಕದ ಪರಿಶೀಲನೆ ನಡೆಸಿದರು. ಆನಂದ್ ಪ್ರಕಾಶ್ ಮೀನಾ, ಪರಮೇಶ್, ಕಿರಣ್ ಗೌರಯ್ಯ, ವೀರೇಂದ್ರ, ಸುಮೇಶ್ ಮತ್ತಿತರರು ಇದ್ದರು.
Published on
ಕುಶಾಲನಗರ:
ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪ್ರಸಾದ್ ಶುಕ್ರವಾರ ಗುಡ್ಡೆಹೊಸೂರು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದರು. ಈ ಸಂದರ್ಭ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಕುಡಿಯುವ ನೀರಿನ ಸರಬರಾಜು ಘಟಕ ಹಾಗೂ ಫಿಲ್ಟರ್ ಯುನಿಟ್‌ಗಳನ್ನು ಪರಿಶೀಲಿಸಿದರು. ನೀರು ನಿರ್ವಾಹಕರು ನಿಯಮಿತವಾಗಿ ನೀರಿನ ಗುಣಮಟ್ಟವನ್ನು ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಬಸವನಹಳ್ಳಿಯ ಆಶ್ರಮ ಶಾಲೆಗೆ ಭೇಟಿ ನೀಡಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು ಹಾಗೂ ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.
ಬಸವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭ ಉಸ್ತುವಾರಿ ಕಾರ್ಯದರ್ಶಿ ಅವರೊಂದಿಗೆ ಕೊಡಗು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ, ಗ್ರಾಮೀಣ ಕುಡಿಯುವ ನೀರು ಸಹಾಯಕ ಕಾರ್ಯ ಪಾಲಕ ಅಭಿಯಂತರÀ ವೀರೇಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net