ಕೊಯನಾಡು ಗ್ರಾಮದಲ್ಲಿ ಬೀದಿ ನಾಟಕ

  ಸಂಪಾಜೆ ವಲಯದ ಕೊಯನಾಡುವಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಬೀದಿ ನಾಟಕ ಪ್ರದರ್ಶನ
ಸಂಪಾಜೆ ವಲಯದ ಕೊಯನಾಡುವಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಬೀದಿ ನಾಟಕ ಪ್ರದರ್ಶನ
Published on
ನಾಪೋಕ್ಲು: ಸಂಪಾಜೆ ವಲಯದ ಕೊಯನಾಡುವಿನಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಬೀದಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಘಟಕವು ಆಯೋಜನೆ ಮಾಡಿದ್ದ ಪ್ರದರ್ಶನವನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರಮಾದೇವಿ ಕಳಗಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಪರಿಸರ, ಸ್ವಚ್ಛತೆ, ಶುದ್ಧ ನೀರು, ಬಾಲ್ಯ ವಿವಾಹ, ಕುಡಿತದ ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆ ನಿಷೇಧ ಇತ್ಯಾದಿ ವಿಷಯಗಳ ಬಗ್ಗೆ ಬೀದಿ ನಾಟಕವು ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ಯೋಜನಾಧಿಕಾರಿ ಪುರುಷೋತ್ತಮ ಮಾತನಾಡಿ, ಹಳ್ಳಿಗಾಡಿನ ಜನರಲ್ಲಿ ಜಾಗೃತಿ ಮೂಡಿಸಲು ಬೀದಿ ನಾಟಕವು ಪ್ರಭಾವಶಾಲಿ ಮಾಧ್ಯಮವಾಗಿದೆ. ಈ ನಿಟ್ಟಿನಲ್ಲಿ ತಂಡ ಶ್ರಮಿಸುತ್ತಿದೆ ಎಂದರು. ನಿಸರ್ಗ ಕಲಾತಂಡದವರು ಜಾಗೃತಿ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಗ್ರಾಮೀಣ ಭಾಗದ ವಿಕಸನವೇ ಸಂಸ್ಥೆ ಧ್ಯೇಯವಾಗಿದೆ ಎಂದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಮೇಲ್ವಿಚಾರಕ ಸುನೀಲ್, ಸೇವಾ ಪ್ರತಿನಿಧಿ ಪುಷ್ಪಲತಾ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net