ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೊಡಗು ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ದಿಶಾ ಭೋದ್ ಫೌಂಡೇಶನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿದ್ಯಾನಿಲಯ ಸೇರಿದಂತೆ ಕಾಲೇಜುಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ ೭ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಜಾಥಾ ಹೊರಡಲಿದ್ದು, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಅಜ್ಜಮಾಡ ಬಿ.ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲಿದೆ. ಈ ಸಂದರ್ಭದಲ್ಲಿ ಬೀದಿನಾಟಕ ಪ್ರದರ್ಶನ ನಡೆಸಿ, ನಶಾ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.