ಮಡಿಕೇರಿಯಲ್ಲಿ ಡಿಎಸ್‌ಎಸ್ ಪ್ರತಿಭಟನೆ

2026-27ರ ಒಟ್ಟು ಬಜೆಟ್‌ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಎಂ. ಗುರುಮೂರ್ತಿ ಶಿವಮೊಗ್ಗ,ಗಾಯತ್ರಿ ನರಸಿಂಹ, ಬೋಜ, ಗೌರಮ್ಮ, ಗಣೇಶ, ಚಿಪ್ಪ ಮತ್ತಿತರರು ಇದ್ದರು.

Published on
ಮಡಿಕೇರಿ:
ರಾಜ್ಯ ಸರ್ಕಾರದ ಮುಂಬರುವ ಒಟ್ಟು ಬಜೆಟ್‌ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು ಎಂದು ಒತ್ತಾಯಿಸಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಾಜ್ಯ ಸಂಚಾಲಕÀ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ, ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ಮುಂದಾಳತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.
ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಪ್ರತಿಭಟನಾಕಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶೋಷಿತ ಸಮುದಾಯಗಳನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸುವ ಒಟ್ಟು ಬಜೆಟ್ ಗಾತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಯ ಅನುಗುಣವಾಗಿ ಅನುದಾನ ಮೀಸಲಿಡಬೇಕು. ಮೀಸಲಿರಿಸಿದ ಅನುದಾನವನ್ನು ರದ್ದಾಗದಂತೆ ಮತ್ತು ಇತರೆ ಯೋಜನೆಗಳಿಗೆ ವರ್ಗಾಯಿಸದಂತೆ ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ ಪಡೆಯಲು ನಿವೇಶನ ಹೊಂದಿರಬೇಕು. ಸ್ವಂತ ನಿವೇಶನ ಇಲ್ಲದ ಬಡವರಿಗೆ ನಿವೇಶನ ಖರೀದಿಸಲು ರೂ.5 ಲಕ್ಷ ಆರ್ಥಿಕ ನೆರವು ನೀಡಬೇಕು ಹಾಗೂ ವಿವಿಧ ವಸತಿ ಯೋಜನೆಗಳಿಗೆ ನೀಡುವ ಮನೆಗಳ ನಿರ್ಮಾಣ ವೆಚ್ಚ ಕನಿಷ್ಟ ರೂ. 5 ಲಕ್ಷ ವರೆಗೆ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿರದಿದ್ದರೆ ಖಾಸಗಿ ಭೂಮಿ ಖರೀದಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಬೋಜ, ಗೌರಮ್ಮ, ಗಣೇಶ, ಚಿಪ್ಪ, ಕಾಳ, ನಿತಿನ್ ಮತ್ತಿತರರು ಈ ಸಂದಭ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net