ಮಳೆಗೆ ಕರಡಿಗೋಡುಚಿಕ್ಕನಳ್ಳಿ ರಸ್ತೆ ಸಂಪರ್ಕ ಕಡಿತ

ವಿರಾಜಪೇಟೆ ತಾಲೂಕಿನ ಅಮ್ಮತಿ ಹೋಬಳಿಯ ಕರಡಿಗೋಡು ಗ್ರಾಮದ ಕಾವೇರಿ ನದಿ ಪಾತ್ರದಲ್ಲಿರುವ ಹೊಳೆ ಉಕ್ಕಿ ಹರಿದ ಪರಿಣಾಮ ಕರಡಿಗೋಡುಚಿಕ್ಕನಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ನೋಡಲ್ ಅಧಿಕಾರಿ ಅನಿಲ್,  ಮಂಜುನಾಥ್, ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Published on

ಪ್ರಮುಖ ಮುಖ್ಯಾಂಶಗಳು

  • Kardigodochikkanalli
ಸಿದ್ದಾಪುರ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ವಿರಾಜಪೇಟೆ ತಾಲೂಕಿನ ಅಮ್ಮತಿ ಹೋಬಳಿಯ ಕರಡಿಗೋಡು ಗ್ರಾಮದ ಕಾವೇರಿ ನದಿ ಪಾತ್ರದಲ್ಲಿರುವ ಹೊಳೆೆ ಉಕ್ಕಿ ಹರಿಯುತ್ತಿದೆ. ಪರಿಣಾಮ ಕರಡಿಗೋಡುಚಿಕ್ಕನಳ್ಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮಾಹಿತಿ ತಿಳಿಯುತ್ತಿದ್ದಂತೆ ನೋಡಲ್ ಅಧಿಕಾರಿ ಅನಿಲ್, ಕಂದಾಯ ನಿರೀಕ್ಷಕರು, ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಪಿಡಿಒ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಯಾವುದೇ ವಾಹನ ಅಥವಾ ಪಾದಚಾರಿಗಳು ಸಂಚರಿಸದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.
ಮಳೆ ಕಡಿಮೆಯಾಗುವವರೆಗೆ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಅಪಾಯದ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪರಿಸ್ಥಿತಿಯ ಮೇಲೆ ಸಂಬಂಧಿಸಿದ ಇಲಾಖೆಗಳು ನಿರಂತರ ನಿಗಾ ವಹಿಸಿದ್ದು, ಮಳೆಯ ಪ್ರಮಾಣ ಮತ್ತು ಹೊಳೆ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net