ಪಾಡಿ ಶ್ರೀಇಗುತ್ತಪ್ಪ ದೇವಸ್ಥಾನದಲ್ಲಿ ದುರ್ಗ ನಮಸ್ಕಾರ ಪೂಜೆ

ಕಕ್ಕಬೆಯ ಪಾಡಿ ಶ್ರೀಇಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಕಕ್ಕಬೆಯ ಪಾಡಿ ಶ್ರೀಇಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
Published on
ನಾಪೋಕ್ಲು: ಸಮೀಪದ ಕಕ್ಕಬೆಯ ಪಾಡಿ ಶ್ರೀಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನವಾದ ಶನಿವಾರ ಪೂಜಾ ವಿಧಿ ವಿಧಾನಗಳು ಜರುಗಿದವು.
ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ಪ್ರಾರಂಭವಾದ ಹೋಮ ಹವನಗಳು ಮುಂದುವರಿದ ಭಾಗವಾಗಿ ಬೆಳಗ್ಗೆ ಗಣಪತಿ ಹೋಮ, ಅಂಕುರ ಪೂಜೆ, ತತ್ವ ಹೋಮ, ತತ್ವ ಕಲಶ ಪೂಜೆ, ತತ್ವ ಕಲಶಾಭಿಷೇಕ, ಪೂಜಾ ಮಂಟಪ ನಮಸ್ಕಾರ, ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ಹಾಗೂ ರಾತ್ರಿ ಅಂಕುರ ಪೂಜೆ, ದುರ್ಗ ನಮಸ್ಕಾರ ಪೂಜೆ ಜರುಗಿತು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ, ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net