ಶಿಕ್ಷಣವೇ ಸಮಾಜದ ಪ್ರಗತಿಗೆ ಅಡಿಪಾಯ

ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಂಥಾಲಯ ಕಟ್ಟಡಕ್ಕೆ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸದರು. ವಿ.ಪಿ. ಶಶಿಧರ್, ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ಕೆ.ಪಿ. ಚಂದ್ರಕಲಾ, ಚಂದ್ರಶೇಖರ್, ನಟೇಶ್ ಗೌಡ, ಪ್ರಕಾಶ್, ದಿನೇಶ್ ಮತ್ತಿತರರು ಇದ್ದರು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಂಥಾಲಯ ಕಟ್ಟಡಕ್ಕೆ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸದರು. ವಿ.ಪಿ. ಶಶಿಧರ್, ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ಕೆ.ಪಿ. ಚಂದ್ರಕಲಾ, ಚಂದ್ರಶೇಖರ್, ನಟೇಶ್ ಗೌಡ, ಪ್ರಕಾಶ್, ದಿನೇಶ್ ಮತ್ತಿತರರು ಇದ್ದರು.
Published on
ಕುಶಾಲನಗರ:
ಶಿಕ್ಷಣವೇ ಒಂದು ಸಮಾಜದ ಪ್ರಗತಿಗೆ ಭದ್ರ ಅಡಿಪಾಯ ಒದಗಿಸುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಂಥಾಲಯ ಕಟ್ಟಡಕ್ಕೆ ಮಂಗಳವಾರ ಭೂಮಿ ಪೂಜೆ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಪುಸ್ತಕಗಳು ಮತ್ತು ಅಧ್ಯಯನಕ್ಕೆ ಪೂರಕ ವಾತಾವರಣ ಸಿಗಬೇಕು ಎಂಬ ಉದ್ದೇಶದಿಂದಲೇ ಈ ಗ್ರಂಥಾಲಯ ನಿರ್ಮಾಣ ಮಾಡಲಾಗುತ್ತಿದೆ. ಕುಶಾಲನಗರದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಸಾವಿರಾರು ಕೋಟಿ ರೂ. ಅನುದಾನ ತರಲಾಗಿದೆ. ಅದರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕುಶಾಲನಗರ ತಾಲೂಕಿನ ಪ್ರತಿ ಕಾಲೇಜು, ಶಾಲೆಗಳನ್ನು ಮಾದರಿ ಸಂಸ್ಥೆಗಳನ್ನಾಗಿ ರೂಪಿಸುವುದು ನಮ್ಮ ಸಂಕಲ್ಪ. ಕಾಂಗ್ರೆಸ್ ಸರ್ಕಾರ ಯುವಕರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಬದ್ಧವಾಗಿದೆ.
ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ಕೊಡಬೇಕು. ಈ ಮೂಲಕ ವಿದ್ಯಾರ್ಥಿ ಜೀವನವನ್ನು ಸರ್ವಾಂಗೀಣ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕುಶಾಲನಗರದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗ ಪಡೆದಿವೆ. ಗ್ರಂಥಾಲಯದಿAದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಮತ್ತೊಂದು ಪ್ರತ್ಯೇಕ ಕಾರ್ಯಕ್ರಮದಲ್ಲಿ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೂತನ ಕಟ್ಟಡವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ, ನೂತನ ಕಟ್ಟಡ ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ. ಕೌಶಲ್ಯ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ತೆರೆದುಕೊಡಲಿರುವ ಈ ಕಟ್ಟಡವು ಪ್ರದೇಶದ ಯುವಕರಿಗೆ ಉಜ್ವಲ ಭವಿಷ್ಯದ ದಾರಿಯಾಗಲಿದೆ ಎಂದರು.
ಕುಶಾಲನಗರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕಾಂಗ್ರೆಸ್ ಮುಖಂಡರಾದ ಕೆ.ಪಿ. ಚಂದ್ರಕಲಾ, ಚಂದ್ರಶೇಖರ್, ನಟೇಶ್ ಗೌಡ, ಪ್ರಕಾಶ್, ದಿನೇಶ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net